ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದನಗಳ ಶೆಡ್ಡು ಕೇಳಿಕೊಂಡು ಗ್ರಾಮ ಪಂಚಾಯಿತಿಗೆ ಬಂತೊಂದು ಎಮ್ಮೆ.!

ಸಂಬರಗಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.!

ಬೆಳಗಾವಿ/ಅಥಣಿ : ದನಗಳ ಶೆಡ್ಡು ನಿರ್ಮಾಣದಲ್ಲಿ ಗೊಂದಲ ಉಂಟಾಗಿದ್ದು, ದನಗಳ ಶೆಡ್ಡು ನಿರ್ಮಾಣಕ್ಕಾಗಿ ಅರ್ಜಿ ನೀಡಿ ಬೇಸತ್ತ ಜನರು ಇಂದು ಗ್ರಾಮ ಪಂಚಾಯಿತಿ ಒಳಗೆ ಎಮ್ಮೆ ತಂದು ಕಟ್ಟುವ ಮೂಲಕ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
2024 ರಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಂಜೂರಾಗಿದ್ದ 134 ದನಗಳ ಶೆಡ್ಡುಗಳನ್ನು ರದ್ದು ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಬಗೆಹರಿಸುವಂತೆ ಪಟ್ಟು ಹಿಡಿದಿದ್ದು, ರೈತರು ಹಲವು ಬಾರಿ ದನಗಳ ಶೆಡ್ಡಿಗಾಗಿ ಅರ್ಜಿ ನೀಡಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಟೊಳ್ಳು ಭರವಸೆ ನೀಡಿ ಜಾರಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಶೆಡ್ಡು ನಿರ್ಮಾಣಕ್ಕಾಗಿ ಜನರು ಗ್ರಾಮ ಪಂಚಾಯ್ತಿಗೆ ಅಲೆದಾಡಿ ಬೇಸತ್ತಿದ್ದಾರೆ, ಈ ಸಮಸ್ಯೆಯ ಬಗ್ಗೆ ಅಭಿವೃದ್ಧಿ ಅಧಿಕಾರಿ ಧರೆಪ್ಪಾ ತಗಲಿ ಇವರನ್ನು ಸಂಪರ್ಕಿಸಿದಾಗ, ನಾವು ಜನರು ಕೊಟ್ಟ ಅರ್ಜಿಯನ್ನು ತೆಗೆದುಕೊಂಡು ಅನುಮೋದನೆಗೆ ಕಳಿಸಿದ್ದೇವೆ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಹೇಳುವ ಮೂಲಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜಾರಿಕೊಂಡಿದ್ದಾರೆ.
ಸಂಬರಗಿ ಗ್ರಾಮದಲ್ಲಿ ನೋಡಿದರೆ ಒಳ್ಳೆ ಸಿ ಸಿ ರಸ್ತೆ ಇಲ್ಲ ಒಳ್ಳೆ ಗಟಾರವೂ ಇಲ್ಲ ಇದರಿಂದ ಇಲ್ಲಿಯ ಜನರು! ಬೇಸತ್ತಿದ್ದಾರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಂತೂ ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುವಂತೆ ಆರಾಮಾಗಿದ್ದಾರೆ.

ವರದಿ ವಿಠ್ಠಲ ಖೋಕಾಟೆ ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ