
ಬೆಳಗಾವಿ : ದಿ. 18/06/2025 ರಂದು ಬೆಳಗ್ಗೆ ಅಥಣಿ ನಗರದ ಸುಕ್ಷೇತ್ರ ಗಚ್ಚಿನ ಮಠದಲ್ಲಿ ನಡೆದ ಮಾದಿಗ ಮೀಸಲಾತಿ ಹೋರಾಟ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟ ಇವರ ಆಶ್ರಯದಲ್ಲಿ ಎಸ್,ಎಸ್,ಎಲ್, ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವು ವಿಜೃಂಭಣೆಯಿಂದ ಜರಗಿತು
ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಹಾಗೂ ಅಬಕಾರಿ ಸಚಿವರಾದ ಸನ್ಮಾನ್ಯ ಶ್ರೀ ಆರ್ ಬಿ ತಿಮ್ಮಾಪುರ ಅವರು ಸೇರಿ ಸಸಿಗೆ ನೀರು ಹಾಕುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕೂಡಾ ನಡೆಯಿತು. ಇದೆ ವೇದಿಕೆಯಲ್ಲಿ ಗಚ್ಚಿನ ಮಠದ ಶ್ರೀ ಮ,ನಿ,ಪ್ರ,ಶಿವಬಸವ ಮಹಾಸ್ವಾಮೀಜಿಗಳು, ಶ್ರೀ ಮ,ನಿ,ಪ್ರ,ಮರುಳಸಿದ್ಧ ಮಹಾಸ್ವಾಮೀಜಿಗಳು, ಶ್ರೀ ಪ,ಪೂ,ಬ್ರಹ್ಮಾನಂದ ಅಜ್ಜನವರು,ಅಥಣಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ, ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಂಕಂಚಿ ,ಮಾದಿಗ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಂಕರ ಪೂಜಾರಿ,ಜಿಲ್ಲಾಧ್ಯಕ್ಷರಾದ ಶ್ರೀ ರಾಜೇಂದ್ರ ಐಹೊಳೆ, ಮುಖಂಡರಾದ ಸಿದ್ದಾರ್ಥ್ ಸಿಂಗೆ, ರಮೇಶ್ ಸಿಂದಗಿ ಹಾಗೂ ಸಮಾಜದ ಹಿರಿಯ ಮುಖಂಡರು ಮತ್ತು ವಿದ್ಯಾರ್ಥಿಗಳು ಮತ್ತು ಪಾಲಕರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.
ವರದಿ : ವಿಠ್ಠಲ ಖೋಕಾಟೆ, ಅಥಣಿ




















