ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಯೋಗ ಶಿಬಿರ ಪ್ರಾರಂಭ

ಕಲಬುರಗಿ/ ಚಿತ್ತಾಪುರ‌: ಪಟ್ಟಣದ ಯರಗಲ್ ರಸ್ತೆಯಲ್ಲಿರುವ ವಿದ್ಯಾನಿಕೇತನ ಪ್ರೌಢ ಶಾಲೆ ಆವರಣದಲ್ಲಿ ಪತಂಜಲಿ ಯೋಗ ಸಮಿತಿ ಚಿತ್ತಾಪುರ ಹಾಗೂ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಚಿತ್ತಾಪುರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಉಚಿತ ಯೋಗ ಶಿಬಿರವನ್ನು ಪ್ರಾರಂಭ ಮಾಡಲಾಯಿತು.
ನಂತರ ಪತಂಜಲಿ ಯೋಗ ಸಮಿತಿ ತಾಲೂಕು ಅಧ್ಯಕ್ಷ ವೀರಣ್ಣ ಶಿಲ್ಪಿ ಅವರು ಮಾತನಾಡಿ, ಜೂ.17ರಿಂದ 21ರ ವರೆಗೆ ಬೆಳಗ್ಗೆ 6 ಗಂಟೆಯಿಂದ 7 ಗಂಟೆಯ ವರೆಗೆ (ಶಿಷ್ಟಾಚಾರದ ಪ್ರಕಾರ) ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ವಿದ್ಯಾನಿಕೇತನ ಶಾಲೆಯ ಮಕ್ಕಳ ಜೊತೆಗೆ, ಚಿತ್ತಾಪುರದ ಯೋಗಾಸಕ್ತರು, ಯೋಗ ಸಾಧಕರು ಮತ್ತು ವಿದ್ಯಾರ್ಥಿಗಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಸನದಲ್ಲಿ ಪಾಲ್ಗೋಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಮಹಿಳಾ ಪ್ರಭಾರಿ ಸುವರ್ಣ ಶಿಲ್ಪಿ, ಪದಾಧಿಕಾರಿಗಳಾದ ಜಗನ್ನಾಥ ಮಂಗಲಗಿ, ಮಲ್ಲಣ್ಣ ಮಾಸ್ಟರ್ ಮೂಡಬುಳ, ಸಂಘಟನಾ ಕಾರ್ಯದರ್ಶಿ ಅಕ್ಕಮಹಾದೇವಿ ದೇಸಾಯಿ, ರಾಜು ಶಿರ್ಪಾ, ಮಲ್ಲಿಕಾರ್ಜುನ್, ಮುನಿಯಪ್ಪ ಕಡಬೂರ ಹಾಗೂ ಶಾಲೆಯ ಮುಖ್ಯ ಗುರು ರಮೇಶ ಯಾದವಾಡ, ದೈಹಿಕ ಶಿಕ್ಷಕರು ಸೇರಿದಂತೆ ಇತರರು ಇದ್ದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!