ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೊದಲು ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ‌ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಆದ್ರೆ, ಇದೀಗ ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಅಧಿಕಾರಿಗಳ (government employees) ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ. ಸರ್ಕಾರಿ ನೌಕರರ ವರ್ಗಾವಣೆ (Transfer guidelines) ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರತಿಭಾ. ಕೆ ಅವರು ಇಂದು (ಜೂನ್ 17) ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ