ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಯಿ ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ

ಬಳ್ಳಾರಿ / ಕಂಪ್ಲಿ : ಬದುಕಿ ಬಾಳಬೇಕಾದ ಮಕ್ಕಳು ಸಾವು ತಾಯಿ ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ – ಕುರುಗೋಡು ತಾಲೂಕಿನ ದಮ್ಮೂರುನಲ್ಲಿ ಹೃದಯ ವಿದ್ರಾವಕ ಘಟನೆ.

ತಾಯಿ ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕೌಟುಂಬಿಕ ಕಲಹದಿಂದ ಮಾನಸಿಕವಾಗಿ ಬೇಸತ್ತಿದ್ದ ಸಿದ್ದವ್ವ (29) ಎಂಬವರು ತಮ್ಮ ಮಕ್ಕಳಾದ ಅಭಿಜ್ಞಾ (7), ಅವನಿ (5) ಮತ್ತು ಆರಾಧ್ಯ (3) ರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಹೊಸೂರ್ ಚಂಪಾ ಗ್ರಾಮದ ಮೂಲದ ಈ ಕುರಿಗಾಹಿ ಕುಟುಂಬ, ದಮ್ಮೂರು ಗ್ರಾಮದಲ್ಲಿ ಕೆಲ ದಿನಗಳಿಂದ ತಮ್ಮ ಕುರಿಗಳನ್ನು ಮೇಯಿಸಲು ತಂಗಿದ್ದರು. ಜೂನ್ 17 (ಮಂಗಳವಾರ) ಬೆಳಿಗ್ಗೆ 11 ಗಂಟೆಯ ಸುಮಾರಿಗೆ ತಾಯಿ ಮತ್ತು ಮಕ್ಕಳು ಕುರಿಗಳನ್ನು ಬಿಟ್ಟು ಕಾಣೆಯಾಗಿದ್ದು, ಜೂನ್ 18 (ಬುಧವಾರ) ಬೆಳಗ್ಗೆ ಗ್ರಾಮಸ್ಥರು ಹತ್ತಿರದ ಕೃಷಿ ಹೊಂಡದ ಬಳಿ ಶೋಧನೆ ನಡೆಸಿದಾಗ ಮೃತದೇಹಗಳು ಪತ್ತೆಯಾಗಿವೆ.ಮೃತ ಮಹಿಳೆ ಸಿದ್ದವ್ವರನ್ನು 10 ವರ್ಷಗಳ ಹಿಂದೆ ಅವರ ಪೋಷಕರು ಹೊಂದೂರಿನ ಸಂಜಯ್ (32) ಎಂಬುವವರಿಗೆ ಮದುವೆ ಮಾಡಿಸಿದ್ದರು.
ಆತ್ಮಹತ್ಯೆಗೆ ಗಂಡನ ಕಿರುಕುಳವೇ ಕಾರಣ ಎಂದು ಮೃತಳ ತಾಯಿ ರೇಣುಕಾ ಕುರುಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ನವೀನ್ ಕುಮಾರ್, ಸಿಪಿಐ ವಿಶ್ವನಾಥ ಹಿರೇಗೌಡರ್, ಹಾಗೂ ಪಿಎಸ್‌ಐ ಸುಪ್ರೀತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸಂಬಂಧ ಸಂಜಯ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!