ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಟ್ಟಣದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಶಬ್ಬೀರ ಹೆಚ್.

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪುರಸಭೆ ಆಡಳಿತ ಮಂಡಳಿಯವರ ಹಾಗೂ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಮುಖಂಡ ಶಬ್ಬೀರ್ ಹೆಚ್ ಹೇಳಿದರು.
ಅವರು ಗುರುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ನಡುವಲ ಮಸೀದಿಯಿಂದ ಜೋಗಿ ಕಾಲುವೆರೆಗೂ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ರಸ್ತೆಗಳ ಅಭಿವೃದ್ಧಿ ಜತೆಗೆ ಪಟ್ಟಣವು ಸುಂದರವಾಗಿ ಕಾಣಲು ಸಾಧ್ಯವಾಗುತ್ತದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಅವಶ್ಯಕತೆ ಇದ್ದು, ಪುರಸಭೆ ಆಡಳಿತವು ಅಭಿವೃದ್ಧಿ ಮಾಡುವ ಭರವಸೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಪಟ್ಟಣದ ಅಭಿವೃದ್ಧಿ ಸಹಕಾರ ನೀಡಬೇಕಾಗಿದೆ. ಕೊಟ್ಟಾಲ್ ರಸ್ತೆ ಅಭಿವೃದ್ಧಿ ಪಡಿಸಿದಂತೆ, ಪುರಸಭೆ ವ್ಯಾಪ್ತಿಯ ಶಿಬಿರದಿನ್ನಿ (ಮಾರುತಿನಗರ)ವರೆಗೆ ಡಬಲ್ ರಸ್ತೆ ಮಾಡುವ ಮೂಲಕ ಅಭಿವೃದ್ಧಿ ಪಡಿಸಬೇಕೆಂದು ಮನವಿ ಮಾಡಿದರು.
ನಂತರ ಪ್ರಭಾರಿ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯ ಸಿ. ಆರ್. ಹನುಮಂತ, ಖಾದಾರಬಾಷಾ, ಸುಧಾಕರ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!