ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಯೋಗ ದಿನಾಚರಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭಾಗಿ

ಬೆಳಗಾವಿ/ಅಥಣಿ: ಅಥಣಿ ನಗರದ ಎಸ್, ಎಸ್,ಎಮ್,ಎಸ್, ಕಾಲೇಜು ಮೈದಾನದಲ್ಲಿ ನಡೆದ ತಾಲೂಕಾ ಆಡಳಿತ,ಪತಂಜಲಿ ಯೋಗ ಪೀಠ ಹರಿದ್ವಾರ ಅಥಣಿ ಶಾಖೆ, ಹಾಗೂ ಸರಕಾರಿ,ಅನುದಾನಿತ,ಅನುದಾನರಹಿತ ಶಾಲಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭವನ್ನು ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಸಸಿಗೆ ನೀರು ಹಾಕಿ, ಯೋಗಾಸನ ಮಾಡುವುದರ ಮೂಲಕ ಚಾಲನೆ ನೀಡಿದರು.


ಮತ್ತು ಇದೇ ವೇಳೆಯಲ್ಲಿ ಮಾತನಾಡಿದ ಶಾಸಕರು
ಇದು ಮಾತನಾಡುವ ವೇದಿಕೆಯಲ್ಲ ಯೋಗವನ್ನು ಮಾಡುವ ವೇದಿಕೆ, ಅದಕ್ಕೆ ನಾನು ಜಾಸ್ತಿ ಮಾತನಾಡುವುದಿಲ್ಲ ನಮ್ಮ ಸಮಾಜವನ್ನು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಅದು ಯೋಗದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಇದೇ ಸಮಾರಂಭದಲ್ಲಿ ಅಂತರಾಷ್ಟ್ರೀಯ ಯೋಗ ಗುರುಗಳಾದ ಶ್ರೀ ಭವರಲಾಲ್ ಆರ್ಯ ಹಾಗೂ ವೈದ್ಯರಾದ ಶ್ರೀ ಮಲ್ಲಿಕಾರ್ಜುನ ಹಂಜಿ, ಅಥಣಿ ತಹಶೀಲ್ದಾರರಾದ ಶ್ರೀ ಸಿದ್ದಾರಾಯ ಬೋಸಗಿ, ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ, ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಕಂಚ್ಚಿ, ಅಥಣಿ ಸಿ.ಪಿ.ಐ ಶ್ರೀ ಸಂತೋಷ ಹಳ್ಳೂರ, ಬನಜವಾಡ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮಣ ಬಣಜವಾಡ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶಿವಾನಂದ ಕಲ್ಲಾಪುರ್ ಹಾಗೂ ಅಥಣಿ ತಾಲೂಕಾ ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಿರಿಯ ಮುಖಂಡರು,ಗಣ್ಯ ವ್ಯಕ್ತಿಗಳು, ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

ವರದಿಗಾರ. ವಿಠ್ಠಲ ಖೋಕಾಟೆ, ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!