ಇಂಗ್ಲೆಂಡ್ : ಲೀಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಮತ್ತೊಮ್ಮೆ ತಮ್ಮ ಅದ್ಭುತ ಬ್ಯಾಟಿಂಗ್ ಪರಾಕ್ರಮವನ್ನು ತೋರಿಸಿದ್ದಾರೆ. ಉಪನಾಯಕತ್ವವಹಿಸಿಕೊಂಡ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುತ್ತಿರುವ ಪಂತ್, ತಮ್ಮ ಟೆಸ್ಟ್ ವೃತ್ತಿಜೀವನದ 7ನೇ ಶತಕವನ್ನು ಪೂರೈಸುವ ಮೂಲಕ ಭಾರತವನ್ನು ಬಲಿಷ್ಠ ಸ್ಥಾನಕ್ಕೆ ತಂದಿದ್ದಾರೆ. ಇಂಗ್ಲೆಂಡ್ ಸ್ಪಿನ್ನರ್ ಶೋಯೆಬ್ ಬಶೀರ್ ಬೌಲಿಂಗ್ನಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಶತಕ ಪೂರೈಸಿದ ಪಂತ್, ಆ ಬಳಿಕ ಮೈದಾನದಲ್ಲಿ ಪಲ್ಟಿ ಹೊಡೆಯುವ ಮೂಲಕ ತಮ್ಮ ಶತಕವನ್ನು ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವರದಿ : ಜಿಲಾನಸಾಬ್ ಬಡಿಗೇರ್




















