ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಳು ಹೆಡೆ ನಾಗಪ್ಪ ದೇವಸ್ಥಾನದ ಹುಂಡಿ ಎಣಿಕೆ : ಒಟ್ಟು 6,22,250 ರೂ.ಗಳ ಹಣ ಸಂಗ್ರಹ

ಬಳ್ಳಾರಿ / ಕಂಪ್ಲಿ : ಸಮೀಪದ ಬುಕ್ಕಸಾಗರ ಗ್ರಾಮದಲ್ಲಿರುವ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ಭಕ್ತರ ಹುಂಡಿ ಎಣಿಕೆ ಕಾರ್ಯ ಶನಿವಾರ ನಡೆದಿದ್ದು, ಒಟ್ಟು 6,22,250 ರೂ.ಗಳ ಹುಂಡಿ ಕಾಣಿಕೆ ಹಣ ಸಂಗ್ರಹವಾಗಿದೆ.
ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರ ನೇತೃತ್ವದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು. 2024 ಏಪ್ರೀಲ್ 17ರಿಂದ 2025ರ ಜೂನ್-21ರವರೆಗಿನ ಭಕ್ತರ ಹುಂಡಿಯಲ್ಲಿ ಹಣ ತುಂಬಿದ್ದು, ಬರೋಬ್ಬರಿ 6 ಲಕ್ಷದ 22 ಸಾವಿರದ 250 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಮತ್ತು ಹುಂಡಿಯಲ್ಲಿ ಬಿದ್ದಿದ್ದ ಭಕ್ತರ ಮೊಬೈಲ್ ಅನ್ನು ಪುನ: ಭಕ್ತರಿಗೆ ಒದಗಿಸಲಾಯಿತು. ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಪರಿವೀಕ್ಷಕ ಮಲ್ಲಪ್ಪ, ಪೊಲೀಸ್ ಸಿಬ್ಬಂದಿ ಗೋಪಿನಾಯಕ್, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ನರೇಂದ್ರ, ಅರ್ಚಕ ವಿಶ್ವನಾಥಸ್ವಾಮಿ, ಸಹಾಯಕ ಪ್ರಶಾಂತ, ಸಿಬ್ಬಂದಿ ನಾಗಪ್ಪ, ಮುಖಂಡರಾದ ಎಲ್.ಎಸ್.ರುದ್ರಪ್ಪ, ರಾಜಶೇಖರಗೌಡ ಸೇರಿದಂತೆ ಗ್ರಾಮಸ್ಥರು ಹಾಗೂ ಪಾಠಶಾಲೆ ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!