ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಶಸ್ವಿಯಾಗಿ ನಡೆದ ಬೃಹತ್ ಉದ್ಯೋಗ ಮೇಳ

ಚಾಮರಾಜನಗರ/ಹನೂರು: ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಅಭಿಮಾನಿಗಳ ಮತ್ತು ಪ್ರತಿಷ್ಠಿತ ಕಂಪನಿಯಾದ ನರಸಾಪುರ ಕೋಲಾರದ ಪ್ರೊಡ್ಯುಟ್ ಸೊಲ್ಯೂಷನ್   ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ಅವರು ವಿದ್ಯಾರ್ಥಿಗಳ ಜೊತೆ ಮಾತನಾಡಿ
ರಾಜ್ಯದ ಪ್ರತಿಷ್ಠಿತ ಕಂಪನಿಯಿಂದ ಉದ್ಯೋಗ ಮೇಳವನ್ನು ಪಟ್ಟಣದಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ನಿರುದ್ಯೋಗವನ್ನು ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ  ವಿದ್ಯಾರ್ಥಿಗಳು ತಮ್ಮ ಸೂಕ್ತ ದಾಖಲಾತಿಗಳನ್ನು ನೀಡಿ ಕಂಪೆನಿಯವರ ಜೊತೆ ಉದ್ಯೋಗ ಮೇಳದಲ್ಲಿ ಮಾಹಿತಿಯನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಕಾರ್ಯಕ್ರಮ ಹೀಗಾಗಿದೆ ಕಡು ಬಡತನದಿಂದ ತಂದೆ ತಾಯಿಗಳು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿರುವುದರಿಂದ ಅಂತಹ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶ ಸದ್ಬಳಕೆ ಮಾಡಿಕೊಂಡು ಮಕ್ಕಳು ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು, ಹೆಚ್ಚಾಗಿ ತಾಲೂಕಿನಿಂದ 18 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ಅರ್ಹತೆ ಹೊಂದಿದ್ದ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ತಮ್ಮ ಯುವ ಪ್ರತಿಭೆಯನ್ನು ಗುರುತಿಸಿಕೊಂಡು ತಮ್ಮ ಆರ್ಥಿಕ ಭವಿಷ್ಯಕ್ಕಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಿವಿಧ ಕಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು :

ಪಟ್ಟಣದ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳು, ಜೊತೆಗೆ ಬೆರಳಿಣಿಕೆಯಷ್ಟು ಗಂಡು ಮಕ್ಕಳು ಉದ್ಯೋಗ ಮೇಳದಲ್ಲಿ ಕಾಣಿಸಿಕೊಂಡಿದ್ದು ಗಮನ ಸೆಳೆಯಿತು ಜೊತೆಗೆ ಇಲ್ಲಿನ ಪ್ರತಿಷ್ಠಿತ ಕಂಪನಿಯ ವ್ಯವಸ್ಥಾಪಕರು ಸಹ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಬಗ್ಗೆ ಸವಿಸ್ತಾರವಾಗಿ  ಮಾಹಿತಿಯನ್ನು ನೀಡುವುದರ ಜೊತೆಗೆ ಗ್ರಾಮಾಂತರದ ಪ್ರದೇಶದ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಉದ್ಯೋಗ ಮೇಳದಲ್ಲಿ ನೂರಾರು ವಿದ್ಯಾರ್ಥಿಗಳು ವಿವಿಧಡೆಯಿಂದ ತಮ್ಮ ಪೋಷಕರ ಜೊತೆ ಭಾಗವಹಿಸುವ ಮೂಲಕ ಪ್ರತಿಷ್ಠಿತ ಕಂಪನಿಯ ವ್ಯವಸ್ಥಾಪಕರಿಂದ ಮಾಹಿತಿ ಪಡೆದು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಮಕ್ಕಳು ಉತ್ಸಾಹದಿಂದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!