ಬೆಂಗಳೂರು: ಯುದ್ಧ ಪೀಡಿತ ಇರಾನ್‌ನಲ್ಲಿ ಸಿಲುಕಿದ್ದ ಒಂದೇ ಗ್ರಾಮದ 16 ಕನ್ನಡಿಗರು ಶನಿವಾರ ಬೆಂಗಳೂರಿಗೆ ಸುರಕ್ಷಿತವಾಗಿ ಬಂದಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು.
ವಿದ್ಯಾಭ್ಯಾಸ, ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಇರಾನ್ ಗೆ ತೆರಳಿದ್ದ ಚಿಕ್ಕಬಳ್ಳಾಫುರ ಜಿಲ್ಲೆಯ ಗೌರಿಬಿದನೂರು ತಾಲೂಜಿನ ಅಲಿಪುರ ಗ್ರಾಮದ 16 ಕನ್ನಡಿಗರು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಅಲ್ಲಿಂದ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದರು.
ವಿಮಾನ ನಿಲ್ದಾಣದಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಮತ್ತು ಕುಟುಂಬ ಸದಸ್ಯರು ಸ್ವದೇಶಕ್ಕೆ ಮರಳಿದವರಿಗೆ ಹೂವಿನ ಹಾರ ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.
ವರದಿ : ಜಿಲಾನಸಾಬ್ ಬಡಿಗೇರ್



















