ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಜಯನಗರ | ಆರೋಗ್ಯಕರ ಜೀವನ ಸಾಗಿಸಲು ಯೋಗ ಸಹಕಾರಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

ವಿಜಯನಗರ/ ಹೊಸಪೇಟೆ : ಆರೋಗ್ಯಕರ ಜೀವನ ಸಾಗಿಸಲು ಮತ್ತು ದೈಹಿಕವಾಗಿ ಸದೃಢವಾಗಲು ಯೋಗವು ಮುಖ್ಯ ಪಾತ್ರ ವಹಿಸಲಿದೆ. ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು ಎಂದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸಲಹೆ ನೀಡಿದರು.
ನಗರದ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಸ್ಕೌಟ್ಸ್ & ಗೈಡ್, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ಎ.ಎಫ್.ಐ. ಮತ್ತು ವಿವಿಧ ಯೋಗ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೊಸಪೇಟೆ ನಗರಸಭೆಯ ಅಧ್ಯಕ್ಷರಾದ ರೂಪೇಶ್ ಕುಮಾರ್ ಮಾತನಾಡಿದರು. ಯೋಗ ಗುರುಗಳಾದ ಕಿರಣ್ ಜೀ ಮತ್ತು ರಾಜೇಶ್ ಕರ್ವಾ ವಿವಿಧ ಆಸನಗಳನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಪ್ರಭಾರಿ ಬಿಇಒ ಶೇಖರಪ್ಪ ಹೊರಪೇಟೆ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮುನಿವಾಸುದೇವರೆಡ್ಡಿ, ಡಾ.ಕೆ.ಹೆಚ್.ಗುರುಬಸವರಾಜ, ಡಾ.ಹೆಚ್.ಕೊಟ್ರಮ್ಮ, ಡಾ.ಸರಸ್ವತಿ, ಡಾ.ಹೇಮ, ಡಾ.ಹಾಲಹಾಲಮ್ಮ, ಆಕಾಶವಾಣಿಯ ನಾಗರತ್ನ, ಪತಂಜಲಿ ಯೋಗ ಸಂಸ್ಥೆಯ ಜಿಲ್ಲಾ ಉಸ್ತುವಾರಿ ಎಫ್.ಡಿ.ಹಳ್ಳಿಕೇರಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಅಧ್ಯಕ್ಷರಾದ ಮಾನಸ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜಿನ ಮಕ್ಕಳು, ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು, ಆಯುಷ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!