ಬಳ್ಳಾರಿ / ಕಂಪ್ಲಿ : ಜನಪ್ರಿಯ ಶಾಸಕರಾದ ಜೆ. ಎನ್. ಗಣೇಶ ಮತ್ತು ಮೆಟ್ರಿಯ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ ಸಮ್ಮುಖದಲ್ಲಿ ಇಂದು ಉಪ್ಪರಹಳ್ಳಿಯ ಗ್ರಾಮ ಪಂಚಾಯತಿ ಸದಸ್ಯರು ಮಾಜಿ ಸದಸ್ಯರು ಹಾಗೂ ಬಿಜೆಪಿಯ ಮುಖಂಡರು ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಆತ್ಮವಿಶ್ವಾಸದಿಂದ ಪಕ್ಷ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ. ಶ್ರೀನಿವಾಸ ( ವಾಸಪ್ಪ) , ಮುಖಂಡರಾದ ಗಂಗಾಧರ ಮೆಟ್ರಿ ಸೇರಿದಂತೆ ಇತರರು ಹಾಜರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















