ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಲೆ ಮಹದೇಶ್ವರ ಬೆಟ್ಟ ಅರಣ್ಯ ವಿಭಾಗದಲ್ಲಿ ಹುಲಿಗಳ ಅಸಹಜ ಸಾವು: ತನಿಖೆಗೆ ಸಚಿವರಾದ ಈಶ್ವರ ಖಂಡ್ರೆ ಆದೇಶ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!