ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ರಮೇಶ್ ಬಂಡಿಸಿದ್ದೇಗೌಡರನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಎಸ್ ಡಿ ಪಿ ಆಯ್ ಪ್ರತಿಭಟನೆ

ಬಾಗಲಕೋಟೆ : ಜಮೀನು ಮುಸ್ಲಿಮರ ಹೆಸರಿಗೆ ಮಾಡಿದರೆ ಅಂತಹ ಅಧಿಕಾರಿಯನ್ನು ನೇಣಿಗೇರಿಸುತ್ತೇನೆ ಎಂದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿ ಸಿದ್ದೇಗೌಡರನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ವತಿಯಿಂದ ಬುಧವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಖಾಸಿಂ ಗೊಳಸಂಗಿಯವರು “ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕರಾದ ರಮೇಶ ಬಂಡಿಸಿದ್ದೇಗೌಡ ಅವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು. ಹಲೋ ಮಿಸ್ಟರ್ ಸಿದ್ದೇಗೌಡ ನೀವು ನಿಮ್ಮ ಆಸ್ತಿಯನ್ನು ನಮಗೆ ಕೊಡ್ತಾ ಇಲ್ಲ. ಅದು ಸರಕಾರದ ಆಸ್ತಿ , ಅದು ನಮಗೆ ದೊರಕಬೇಕಾದರೆ ಹೇಗಾದರೂ ದೊರಕುತ್ತದೆ, ರಾಷ್ಟ್ರೀಯ ಕಾಂಗ್ರೆಸ್ಸಿನ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಕಾಂಗ್ರೆಸ್ಸಿನ ಒಂದು ಸಭೆಯಲ್ಲಿ ಮಾತನಾಡುತ್ತಾ ನಮ್ಮ ಕಾಂಗ್ರೆಸ್ ಪಕ್ಷವು ತೊಂದರೆ ಈಡಾಗುತ್ತಿರುವುದು ಆರ್ ಎಸ್ ಎಸ್ ಮತ್ತು ಬಿಜೆಪಿ ಮೆಂಟಾಲಿಟಿ ಇರುವಂತ ಜನರಿಂದ ಆಗ್ತಾ ಇದೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಆದರೆ ಈಗ ಅವರದ್ದೆ ಸರ್ಕಾರವಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಇದಕ್ಕೆ ಉದಾಹರಣೆಯಾಗಿ ಹೊರಹೊಮ್ಮಿದ್ದಾರೆ. ಇದು ಅವರಿಗೆ ಗೊತ್ತಿರಬೇಕು ಎಂದು ಹೇಳಿದರು. ಸಿಎಂ ಸಿದ್ರಾಮಯ್ಯನವರೇ ಇಂತಹ ಕೆಟ್ಟ ಮನಸ್ಥಿತಿಯುಳ್ಳ ಶಾಸಕರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾ ಗೊಳಿಸಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಾಗಲಕೋಟೆ ತಾಲೂಕಿನ ಪ್ರಧಾನ ಕಾರ್ಯದರ್ಶಿಯಾದ ಸದ್ದಾಂ ಮುಲ್ಲಾ, ಮೈಬೂಬ ಹಡಗಲಿ ,ಮೋಹಿನ್ ಕಲಾದಗಿ ಅಲ್ತಾಫ್ ಮದರಿ ,ಸಾಧಿಕ ಕಾಂಟ್ರಾಕ್ಟರ್, ಅಬ್ದುಲ್ ರಜಾಕ್ ಕಟ್ನಹಳ್ಳಿ, ಪಕ್ಷದ ನಾಯಕರು , ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!