ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ: ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧ

ಬಳ್ಳಾರಿ / ಕಂಪ್ಲಿ : ಜಿಲ್ಲೆಯಾದ್ಯಾಂತ ಜೂನ್ 27ರಿಂದ ಜುಲೈ 7ರವರೆಗೆ ನಡೆಯಲಿರುವ ಮೊಹರಂ ಹಬ್ಬವನ್ನು ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನಿಷೇಧಿಸಿದ್ದಾರೆ.

ಈ ನಿಷೇಧದ ಹಿಂದಿರುವ ಪ್ರಮುಖ ಕಾರಣವೆಂದರೆ, ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮೊಹರಂ ಆಚರಣೆ ವೇಳೆ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳ ಬಗ್ಗೆ ಮುಂಚಿತವಾಗಿ ವರದಿಯಾಗಿದ್ದು, ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದೆ.

ನಿಷೇಧಿತ ಗ್ರಾಮಗಳ ಪಟ್ಟಿ:

ಬಳ್ಳಾರಿ ತಾಲ್ಲೂಕು: ಗಾಂಧಿನಗರ ಠಾಣೆ ವ್ಯಾಪ್ತಿಯ ತಾಳೂರು ರಸ್ತೆ – ಕನ್ನಡ ನಗರ

ಸಿರುಗುಪ್ಪ ತಾಲ್ಲೂಕು: ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್, ಅಲಬನೂರು

ತೆಕ್ಕಲಕೋಟೆ ತಾಲ್ಲೂಕು: ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು

ಸಿರಿಗೇರಿ ತಾಲ್ಲೂಕು: ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು

ಪಿಡಿ ಹಳ್ಳಿ: ಅಸುಂಡಿ
ಕಂಪ್ಲಿ: ನಂ.15-ಗೋನಾಳು

🚫 ನಿಷೇಧಿತ ಚಟುವಟಿಕೆಗಳು:
ಶಸ್ತ್ರಾಸ್ತ್ರಗಳು, ಬಡಿಗೆ, ಗದೆ, ಚೂರಿ ಮೊದಲಾದವುಗಳನ್ನು ಧರಿಸುವುದು
ಸ್ಪೋಟಕ ಅಥವಾ ಜ್ವಲನಶೀಲ ವಸ್ತುಗಳನ್ನು ಕೊಂಡೊಯ್ಯುವುದು

ಭಾವಚಿತ್ರಗಳು ಅಥವಾ ಘೋಷಣೆಗಳ ಮೂಲಕ ಭಾವನೆಗೆ ಧಕ್ಕೆ ತರುವುದು
ಮೆರವಣಿಗೆಗಳು, ಪದ ಹಾಡುವಿಕೆ, ಬಂಡಾಟಗಳು, ಸನ್ನೆ ಪ್ರದರ್ಶನ ಮುಂತಾದವು

ಜಿಲ್ಲಾಡಳಿತ ಹೊರಡಿಸಿರುವ ಆದೇಶದಂತೆ, ಈ ನಿಷೇಧ ವಿಧಾನದ ಉಲ್ಲಂಘನೆ ಮಾಡಿದರೆ ಪೊಲೀಸರು ವಸ್ತುಗಳನ್ನು ವಶಕ್ಕೆ ಪಡೆಯಲು ಅಧಿಕಾರ ಹೊಂದಿದ್ದು, ಅವುಗಳನ್ನು ಸರ್ಕಾರಕ್ಕೆ ಜಮಾ ಮಾಡಲಾಗುವುದು.
ಸಾರ್ವಜನಿಕರು ಕಾನೂನು ಪಾಲನೆ ಮಾಡಬೇಕೆಂಬ ವಿನಂತಿಯನ್ನು ಜಿಲ್ಲಾಡಳಿತ ಮಾಡಿದ್ದು, ಯಾವುದೇ ಅನಾಹುತ ತಪ್ಪಿಸಲು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!