ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಲಂಚಗುಳಿತನ, ಭ್ರಷ್ಟಾಚಾರ ಹಾಗೂ ಆಡಳಿತ ವ್ಯವಸ್ಥೆ ಖಂಡಿಸಿ ಬಾದಾಮಿಯಲ್ಲಿ ಜ್ಯಾತ್ಯಾತೀತ ಜನತಾ ದಳದ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸಾರಥ್ಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಾದಾಮಿಯಲ್ಲಿಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಾತ್ಯಾತೀತ ಜನತಾದಳ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಯುವ ನಾಯಕ ಹನಮಂತ ಮಾವಿನಮರದ ನೇತೃತ್ವದಲ್ಲಿ ನಗರದ ಶ್ರೀ ಬಸವೇಶ್ವರ ವೃತ್ತದಿಂದ ಬಸವೇಶ್ವರರ ಭಾವಚಿತ್ರಕ್ಕೆ ಹೂಮಾಲೆ ಅರ್ಪಿಸಿ ಪ್ರತಿಭಟನೆ ಸಾಗಿತು. ಮುಖ್ಯ ರಸ್ತೆಯ ಮೂಲಕ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆ ಕೂಗುತ್ತಾ ಸಾಗಿದ ಪ್ರತಿಭಟನಾಕಾರರು ಮುಖ್ಯ ರಸ್ತೆಯ ಮೂಲಕ ಸಾಗುತ್ತಾ ಬಾಬಾಸಾಹೇಬ ಅಂಬೇಡ್ಕರ ಅವರ ಪ್ರತಿಮೆಗೆ ಹೂಮಾಲೆ ಅರ್ಪಿಸಿ ರಾಮದುರ್ಗ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಹಾಗೆಯೇ ಸಾಗುತ್ತಾ ಪಿ. ಎಲ್. ಡಿ. ಬ್ಯಾಂಕ್ ಆವರಣದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜೆ. ಡಿ. ಎಸ್. ನ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಹನಮಂತ ಮಾವಿನಮರದ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಜೆ. ಡಿ. ಎಸ್.ಪಕ್ಷದ. ಹಿರಿಯ ಮುಖಂಡ ಚಂದ್ರಶೇಖರ ಶೇಖ್, ಚನ್ನಪ್ಪ ಮೇಟಿ, ಸಂತೋಷ ಬಿಜಾಪುರ, ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ಹಡಪದ, ಚಂದ್ರು ಸೂಡಿ, ಯುವ ಮುಖಂಡ ಹುಚ್ಛೇಶ್ ಹದ್ದನ್ನವರ, ಅಜೀಜ್ ಮುಲ್ಲಾ, ತೈಯಬ ಅಲಿ ಖಲೀಫಾ, ಬಸವರಾಜ್ ಅಮರಗೋಳ ಸೇರಿದಂತೆ ಇನ್ನೂ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ನಿಂಬಯ್ಯ ಕುಲಕರ್ಣಿ, ಬಾದಾಮಿ



















