ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂದಾಯ ದಿನಾಚರಣೆ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯಲ್ಲಿ ಕಂದಾಯ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಅಮರೇಶ್. ಜಿ. ಕೆ ಇವರು ಕಂದಾಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನು ನುಡಿಯುತ್ತಾ, ಕಂದಾಯ ಇಲಾಖೆಯಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ಡಿಜಟಲೀಕರಣಗೊಳಿಸಲಾಗುತ್ತಿದೆ ಭೂಸುರಕ್ಷಾ ಯೋಜನೆಯಡಿಯಲ್ಲಿ ಭೂಸುರಕ್ಷಾ ಯೋಜನೆ ಅಡಿ ಅಭಿಲೇಖಾಲಯದ ಕೈಬರಹ ಪಹಣಿ ಹಾಗೂ ಇತರೆ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗುತ್ತಿದ್ದು, ಈವರೆಗೆ 7,22,218 ಪುಟಗಳಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿರುತ್ತದೆ ಜನರಿಗೆ ತ್ವರಿತ ಸೇವೆಯನ್ನು ಮಾಡುತ್ತಾ ಜನರಿಗೆ ಹತ್ತಿರವಾಗಿರುವ ಕಂದಾಯ ಇಲಾಖೆ ಮಾತೃ ಇಲಾಖೆಯಾಗಿದೆ ಎಂದರು.

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಕೆ. ನೇಮಿರಾಜನಾಯ್ಕ ರವರು ಕಾರ್ಯಕ್ರವನ್ನು ಉದ್ಘಾಟಿಸಿ ಇತ್ತೀಚಿನ ದಿನಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಮೊಬೈಲ್ ನಲ್ಲಿ ಅನೇಕ ಯ್ಯಾಪ್ಗಳ ಮೂಲಕ ಕಾರ್ಯವನ್ನು ನಿರ್ವಹಿಸಬೇಕಾಗಿರುತ್ತದೆ. ಇವರಿಗೆ ಇದರಿಂದ ತೊಂದರೆಯಾಗುತ್ತಿರುವುದನ್ನು ಅರಿತು ಸರ್ಕಾರದಿಂದ ಲ್ಯಾಪ್ಟಾಪ್ಗಳನ್ನು ನೀಡಲಾಗಿದೆ. ಇದರಿಂದ ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯವನ್ನು ತ್ವರಿತವಾಗಿ ಮಾಡಲು ಅನುಕೂಲವಾಗಲಿದೆ. ಕಂದಾಯ ಇಲಾಖೆಗೆ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಸೌಜನ್ಯಯುತವಾಗಿ ವರ್ತಿಸಿ ಅವರಿಗೆ ಸಹಾಯವನ್ನು ಮಾಡುವಂತೆ ಕಿವಿಮಾತು ಹೇಳಿದರು. ನಂತರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಗಳನ್ನು ವಿತರಣೆ ಮಾಡಿದರು. ಹಾಗೂ ಭೂಸುರಕ್ಷಾ ಯೋಜನೆ ಅಡಿ ಅಭಿಲೇಖಾಲಯದ ಕೈಬರಹ ಪಹಣಿ ದಾಖಲೆಗಳನ್ನು ಟಿಜಿಟಲೀಕರಣಗೊಳಿಸಿದ ಪ್ರತಿಯನ್ನು ಸಾರ್ವಜನಿಕರಿಗೆ ಸಾಂಕೇತಿಕವಾಗಿ ವಿತರಣೆ ಮಾಡಿದರು
ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಿ. ಆನಂದಕುಮಾರ್, ಭೂಮಾಪನ ಇಲಾಖೆಯ ಎಡಿಎಲ್ಆರ್ ವಿಜಯಕುಮಾರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಜಿ ಸಿದ್ದಯ್ಯ, ನೌಕರರ ಸಂಘದ ಅಧ್ಯಕ್ಷರಾದ ಯೋಗೀಶ್ವರದಿನ್ನೆ, ಗ್ರೇಡ್-2 ತಹಶೀಲ್ದಾರ್ ಪ್ರತಿಭಾ ಎಂ, ಜಿ ಪಂ ಮಾಜಿ ಸದಸ್ಯರಾದ ಹರ್ಷವರ್ಧನ್ ಕಂದಾಯ ಇಲಾಖೆಯ ಅಧಿಕಾರಿ ನೌಕರರು ಹಾಜರಿದ್ದರು. ದ್ಯಾವಮ್ಮ ಪ್ರಾರ್ಥಿಸಿದರೆ ಕೊಟ್ರಮ್ಮ ಸ್ವಾಗತಿಸಿದರು. ಸಿ.ಮ. ಗುರುಬಸವರಾಜ ಇವರು ಕಾರ್ಯಕ್ರಮ ನಿರೂಪಿಸಿದರು. ಈ ಸಮಯದಲ್ಲಿ ನಿವೃತ್ತ ಉಪತಹಶೀಲ್ದಾರ್ ಕೆ ನಾಗರಾಜ ಹಾಗೂ ನಿವೃತ್ತ ಶಿರಸ್ತೇದಾರರು ಶ್ರೀಮತಿ ಲೀಲಾ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವರದಿ ಶಶಾಂಕ್ ಪಿ‌.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!