
ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ 2025ಮತ್ತು 2026ನೇ ಸಾಲಿನ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಿರ್ಮಲಾಲಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆಲಮೇಲದಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ವದ ಹಾಗೂ ನಿರ್ಣಾಯಕ ದಿನ ಆಚರಣೆ ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕೆ ವಿಜಯ್ ಕುಮಾರ್ ತಾಲೂಕು ದಂಡಾಧಿಕಾರಿಗಳು ಭಾಗವಹಿಸಿ ವಿದ್ಯಾರ್ಥಿಯ ಜೀವನವು ಬಂಗಾರದಂತೆ ಸದೃಢವಾದ ಮನಸ್ಸಿನಿಂದ ವಿದ್ಯಾರ್ಥಿಗಳ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಗುರಿ ಇಟ್ಟುಕೊಂಡು ಶಿಕ್ಷಣದಲ್ಲಿ ಆಸಕ್ತಿಯನ್ನು ತೋರಿದರೆ ತಾವು ತಮ್ಮ ಜೀವನದಲ್ಲಿ ಎತ್ತರವಾಗಿ ಬೆಳೆಯಲು ಸಾಧ್ಯ. ಉನ್ನತವಾದ ಶಿಕ್ಷಣವನ್ನು ಪಡೆಯಬೇಕು ತಾಯಿ ತಂದೆ ಗುರುಹಿರಿಯರಿಗೆ ಹೆಸರು ತರುವಂತಹ ನಿಟ್ಟಿನಲ್ಲಿ ತಾವುಗಳು ಒಳ್ಳೆಯ ನೀತಿ ಪಾಠವನ್ನು ಅಳವಡಿಸಿಕೊಂಡಿದ್ದೆ ಆದರೆ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳು ಗುರುಮಾತೆಯರು ಮುದ್ದು ಮಕ್ಕಳು ಭಾಗಿಯಾಗಿದ್ದರು.
ವರದಿ ಹಣಮಂತ ಚ ಕಟಬರ



















