ಬೆಂಗಳೂರಿನಲ್ಲಿ ಕರ್ನಾಟಕ ನೀರಾವರಿ ನಿಗಮದ ಕಚೇರಿಯಲ್ಲಿ ಅಥಣಿ ತಾಲೂಕಿನ ಪೂರ್ವ ಭಾಗದ ರೈತರ ಜಮೀನುಗಳಿಗೆ ನೀರಾವರಿ ಒದಗಿಸುವ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಯೋಜನೆಯಾದ ಕೊಟ್ಟಲಗಿ ಹಾಗೂ ಕಕಮರಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಮಾಡುವ ಬಗ್ಗೆ ಕನಾ೯ಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿದೇ೯ಶಕರಾದ ಶ್ರೀ ರಾಜೇಶ್ ಅಮ್ಮಿನಬಾವಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ಪ್ರಗತಿ ಪರಿಶೀಲನೆ ಸಭೆ ನಡೆಸಿದರು ಮತ್ತು ಕಾಮಗಾರಿಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡು, ಕಾಮಗಾರಿಯು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು ಮತ್ತು ಇನ್ನೂ ಅನೇಕ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ವರದಿ. ವಿಠ್ಠಲ ಖೋಕಾಟೆ, ಅಥಣಿ



















