ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಕೋರ್ಟ್ ಆದೇಶ: ಹಲವರಿಗೆ ಢವ ಢವ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್​ ಎಸ್​ಐಟಿಗೆ ಸೂಚನೆ ನೀಡಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಇನ್ನು, ಸಿಬಿಐನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಅವರು ರಿಟ್​ ಅರ್ಜಿ ಸಲ್ಲಿಸಿದ್ದರು.

ಎಲ್ಲಿಗೆಲ್ಲಾ ವರ್ಗಾವಣೆಯಾಗಿತ್ತು ಹಣ?

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂ. ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಬಹಿರಂಗವಾಗಿತ್ತು. 187 ಕೋಟಿ ರೂಪಾಯಿಯಲ್ಲಿ 94 ಕೋಟಿ ಹೈದರಾಬಾದ್​ ಬ್ಯಾಂಕ್​ಗೆ ಅಂದರೆ, ಹೈದರಾಬಾದ್​ನ ಫಸ್ಟ್​ ಬ್ಯಾಂಕ್​​ಗೆ ವರ್ಗಾಯಿಸಲಾಗಿತ್ತು. ಫಸ್ಟ್​ ಬ್ಯಾಂಕ್​ನ ಭರ್ತಿ 18 ನಕಲಿ ಖಾತೆಗಳಿಗೆ 94 ಕೋಟಿ ರೂಪಾಯಿ ವರ್ಗಾವಣೆ ಆಗಿತ್ತು. ಇದೆಲ್ಲವೂ ಮಾಜಿ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್​ ಹಾಗೂ ಆಂಧ್ರದ ನಾಗೇಶ್ವರ್ ರಾವ್ ಸೂಚನೆಯಂತೆ ವರ್ಗಾವಣೆಯಾಗಿತ್ತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!