ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಂತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ, ಸಾರ್ವಜನಿಕರಿಗೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇಂದು ಕಂಪ್ಲಿ ಪಟ್ಟಣದ ಚಪ್ಪರದಹಳ್ಳಿ ಏರಿಯಾದಲ್ಲಿ ಸ್ವ ಸಹಾಯ ಸಂಘದ ಸದಸ್ಯರಿಗೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಗೌರವ ಶಿಕ್ಷಕರಾದ ರಾಮು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ, ಉದಾಹರಣೆಗಳ ಮೂಲಕ ಜನರಿಗೆ ಮನ ಮುಟ್ಟುವಂತೆ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ತಂಬಾಕು ಸೇವನೆ ಮಾಡದಂತೆ ಕಾಳಜಿ ಮಾಡುವಂತೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿದ ಧರ್ಮಸ್ಥಳ ಸಂಸ್ಥೆಯ ಕಂಪ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ರಾಘವೇಂದ್ರ ರವರು ಮಾತನಾಡಿ ಈ ಕಾರ್ಯಕ್ರಮ ನಡೆಸುತ್ತಿರುವ ಉದ್ದೇಶ ಮತ್ತು ಯೋಜನೆಯ ವಿವಿಧ ಸೌಲಭ್ಯಗಳಾದ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೀಡುತ್ತಿರುವ ಸಹಾಯಧನದ ಬಗ್ಗೆ, ಸಮುದಾಯ ಭವನ ನಿರ್ಮಾಣಕ್ಕೆ ಸಹಾಯಧನ, ಹಿಂದೂ ರುದ್ರ ಭೂಮಿಯ ಅಭಿವೃದ್ಧಿ, ಶುದ್ಧಗಂಗಾ ಘಟಕ ರಚನೆ, ವಿಜ್ಞಾನದ ಶಿಷ್ಯವೇತನ, ಜ್ಞಾನದೀಪ ಶಿಕ್ಷಕರ ನೇಮಕ, ಶಾಲೆಗಳಿಗೆ ಮೂಲ ಸೌಕರ್ಯ ಸೇರಿದಂತೆ ಇನ್ನೂ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಯೋಜನೆಯ ತಾಲೂಕಿನ ಕೃಷಿ ಅಧಿಕಾರಿಗಳಾದ ಸಂಜುಕುಮಾರ್, ಒಕ್ಕೂಟದ ಪದಾಧಿಕಾರಿಗಳಾದ ರಾಜೇಶ್ವರಿ, ರೇಣುಕಾ, ಮುನ್ನಮ್ಮ, ಮೈಮುನಾ ಬೇಗಂ, ವಲಯದ ಮೇಲ್ವಿಚಾರಕರಾದ ಶ್ರೀ ಮಂಜಣ್ಣ, ಸೇವಾಪ್ರತಿನಿಧಿಗಳಾದ ರೂಪಾ, ಹಸೀನಾ, ಸ್ವ ಸಹಾಯ ತಂಡದ ಸದಸ್ಯರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನೆರವೇರಿತು.
ವರದಿ: ಜಿಲಾನಸಾಬ್ ಬಡಿಗೇರ್



















