ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನಾಚರಣೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿ, ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಶ್ರೀಮತಿ ಎಂ ಪ್ರತಿಭಾ ಗ್ರೇಡ್-2 ತಹಶೀಲ್ದಾರ್ ಇವರ ನೇತೃತ್ವದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಇವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಫ.ಗು.ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುತ್ತಾ, ಸುಮಾರು 20 ವರ್ಷಗಳ ನಿರಂತರ ಪರಿಶ್ರಮದಿಂದ ತಾಳೆಗಳನ್ನು ಸಂಗ್ರಹಿಸಿ, ಪರಿಷ್ಕರಿಸಿ ಮುದ್ರಣ ಮಾಡಿ ಸುಮಾರು 300ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು.
ಆ ಮೂಲಕ ವಚನಗಳನ್ನು ಸಂರಕ್ಷಿಸಿದ ಕಾರಣ ಇವರನ್ನು “ ವಚನ ಪಿತಾಮಹಾ ” ಎಂದು ಕರೆಯಲಾಗುತ್ತದೆ. ಇವರ ಸೇವೆಯನ್ನು ಸ್ಮರಿಸುತ್ತಾ ಸರ್ಕಾರವು ಈ ದಿನವನ್ನು “ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ”ಯಾಗಿ ಆಚರಿಸಲಾಗುತ್ತಿದೆ. 12ನೇ ಶತಮಾನರ ಬದುಕನ್ನು, ಅವರ ವಚನಗಳನ್ನ ಸಂರಕ್ಷಿಸಿ ಉಳಿಸಿದ ಇವರ ಸೇವೆಯನ್ನು ನೇವೆಲ್ಲಾ ಸ್ಮರಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಕಛೇರಿಯ ಸಿಬ್ಬಂದಿಯವರು ಹಾಜರಿದ್ದರು.

ವರದಿ ಶಶಾಂಕ್ .ಪಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!