ಬಳ್ಳಾರಿ / ಕಂಪ್ಲಿ : ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾರ್ಮಿಕರ ಸಂಚಾರಿ ಆರೋಗ್ಯ ಘಟಕ ಸೇವೆಗೆ ಶಾಸಕ ಜೆ. ಎನ್. ಗಣೇಶ ಚಾಲನೆ ನೀಡಿ ಮಾತನಾಡಿ ಕಂಪ್ಲಿ ತಾಲೂಕಿನ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೇ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಈ ಆರೋಗ್ಯ ವಾಹನ ಒಳಪಡಿಸುತ್ತದೆ, ಚಿಕಿತ್ಸೆ ಹಾಗೂ ಸಲಹೆ ನೀಡಲು ಮೊದಲಾದ ಸೇವೆ ಒದಗಿಸಲು ಈ ಸಂಚಾರಿ ಆರೋಗ್ಯ ಘಟಕಗಳನ್ನು ನಮ್ಮ ಸರ್ಕಾರ ಸಜ್ಜುಗೊಳಿಸಿದೆ.
ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ರೂಪುಗೊಂಡಿರುವ ಈ ಘಟಕಗಳಲ್ಲಿ ವಿವಿಧ ತಪಾಸಣೆಗಳು, ಹೈಟೆಕ್ ಆರೋಗ್ಯ ಸೌಲಭ್ಯ ವ್ಯವಸ್ಥೆಯಿದ್ದು, ಒಂದು ಕ್ಲಿನಿಕ್ನಲ್ಲಿ ಹೊರರೋಗಿಗಳಿಗೆ ದೊರೆಯುವ ಎಲ್ಲಾ ಸೌಲಭ್ಯಗಳೂ ಇದರಲ್ಲಿ ಸಿಗಲಿವೆ ಇದರ ಸೌಲಭ್ಯವನ್ನು ಕಟ್ಟಡ ಕಾರ್ಮಿಕರು ಸದ್ದು ಉಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳು, ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ ಶ್ರೀನಿವಾಸರಾವ್, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ ಉಸ್ಮಾನ್, ಪುರಸಭೆ ಸದಸ್ಯ ಸಿ.ಆರ್. ಹನುಮಂತ, ಕೆ. ಎಸ್. ಚಾಂದ್ ಭಾಷಾ, ಮೆಟ್ರಿ ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹೊಸಕೋಟೆ ಜಗದೀಶ, ಮುಖಂಡರಾದ ಅಕ್ಕಿ ಜಿಲಾನ್, ಸುಧಾ, ರಾಘವೇಂದ್ರ, ಸೇರಿದಂತೆ ಮುಖಂಡರು ಹಾಗೂ ಕಟ್ಟಡ ಕಾರ್ಮಿಕರು ಕಾರ್ಮಿಕರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ



















