ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬಿಡುಗಡೆಯಾದ ಲ್ಯಾಪ್ ಟಾಪ್‌ಗಳನ್ನು ಶಾಸಕ ಜೆ.ಎನ್.ಗಣೇಶ ಇವರು ಬುಧವಾರ ವಿತರಿಸಿದರು.
ನಂತರ ಶಾಸಕ ಗಣೇಶ ಅವರು ಮಾತನಾಡಿ, ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವೈಕರಿ ಹೆಚ್ಚಿಸುವ ಮತ್ತು ಅವರು ಡಾಟಾ ಎಂಟ್ರಿ ಮಾಡಲು ಅನುಕೂಲದ ಹಿತದೃಷ್ಟಿಯಿಂದ ಲ್ಯಾಪ್‌ಟಾಪ್‌ಗಳನ್ನು ನೀಡಿದೆ. ಈ ಯೋಜನೆಯ ಸದುಪಯೋಗದೊಂದಿಗೆ ಜನರ ಸೇವೆಯನ್ನು ಅತಿ ವೇಗದಲ್ಲಿ ಮಾಡಲು ಮುಂದಾಗಬೇಕು ಎಂದರು.
ಇಲ್ಲಿನ 13 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್‌ಬಾಷಾ, ಸಿ.ಆರ್.ಹನುಮಂತ, ತಹಶೀಲ್ದಾರ್ ಮಂಜುನಾಥ ನಾಯಕ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಆರ್‌ಐ ಜಗದೀಶ್, ಶಿರಸ್ತೇದಾರ ರಮೇಶ ಸೇರಿದಂತೆ ಮುಖಂಡರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!