ಬಳ್ಳಾರಿ/ ಕಂಪ್ಲಿ: ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಈ ವೇಳೆ ಧರ್ಮಸ್ಥಳ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಸಂಜುಕುಮಾರ್ ಮಾತನಾಡಿ ಪರಿಸರ ಮತ್ತು ಮಾನವನ ನಡುವೆ ಅವಿನಾಭಾವ ಸಂಬಂಧವಿದ್ದು ಪರಿಸರ ರಕ್ಷಣೆ ದೃಷ್ಟಿಯಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಸಸಿ ನೆಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ನಂತರ ಉಪ ಪ್ರಾಚಾರ್ಯ ಹುಲುಗಪ್ಪ ಮಾತನಾಡಿ ಹಬ್ಬ ಹರಿದಿನಗಳ ನೆಪದಲ್ಲಿ ಮರ ಗಿಡಗಳನ್ನು ಕುಡಿಯುವುದು ನಿಲ್ಲಿಸಬೇಕು ಪ್ರತಿಯೊಬ್ಬ ವಿದ್ಯಾರ್ಥಿ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ, ಶಿಕ್ಷಕರಾದ ಶಿವನೇಗೌಡರ ರಾಮಪ್ಪ, ವಸುಂದರ, ಒಕ್ಕೂಟದ ಪದಾಧಿಕಾರಿಗಳಾದ ಲಕ್ಷ್ಮೀ, ಅಶ್ವಿನಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















