ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದ ಶಾಸಕ ಡಾ ಸಿದ್ದು ಪಾಟೀಲ

ಬೀದರ್/ ಚಿಟಗುಪ್ಪಾ: ಹುಮ್ನಾಬಾದ ಮತ್ತು
ಚಿಟಗುಪ್ಪ ತಾಲೂಕುಗಳನ್ನು ಅಭಿವೃದ್ಧಿ ಮಾಡುವುದೇ ನನ್ನ ಮುಖ್ಯ ಗುರಿ ಎಂದು ಕ್ಷೇತ್ರದ ಶಾಸಕ ಡಾ. ಸಿದ್ದು ಪಾಟೀಲ್ ಅವರು ಹೇಳಿದರು.

ತಾಲೂಕಿನ ಕಂದಗೂಳ ಹಾಗೂ ತಾಳಮಡಗಿ ಗ್ರಾಮಗಳಲ್ಲಿ ಜರುಗಿದ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿ, 2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಡಿಯಲ್ಲಿ 02 ಕೋಟಿ ಅಧಿಕ ಅಂದಾಜು ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಕಂದಗೋಳ ಗ್ರಾಮದಿಂದ ಮಂಗಲಗಿ ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಮುದಾಯ ಭವನ, ಸಿಸಿ ರಸ್ತೆ ಕಾಮಗಾರಿ ಕೆಲಸಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಇನ್ನಿತರ ವಿವಿಧ ಯೋಜನೆಗಳ ಸೌಲಭ್ಯಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ಭಾಗವನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡಲಾಗುವುದು. ಈ ನಿಟ್ಟಿನಲ್ಲಿ ನಿರಂತರವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದೇವೆ.
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಿ,ಈ ಭಾಗದ ಸರ್ವಾಂಗೀಣ ವಿಕಾಸಕ್ಕಾಗಿ ಹಗಲಿರುಳೆನ್ನದೆ ಶ್ರಮಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಕೃಷಿ ಸಮಾಜದ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ, ಮುಖಂಡರಾದ ಸಂತೋಷ ಪಾಟೀಲ, ಶ್ರೀಮಂತ ಪಾಟೀಲ, ಜಗನ್ನಾಥ ದೇವಣಿ ಸೇರಿದಂತೆ ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!