ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತುಂಗಭದ್ರಾ ಜಲಾಶಯ– 20 ಕ್ರಸ್ಟ್‌ಗೇಟ್‌ನಿಂದ ನೀರು ಹೊರಗೆ

ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ 78.23 ಟಿಎಂಸಿ ಅಡಿ ತಲುಪಿದ್ದು, ಗುರುವಾರ 20 ಕ್ರೆಸ್ಟ್‌ಗೇಟ್‌ಗಳನ್ನು ತೆರೆದು, 62,766 ಕ್ಯೂಸೆಕ್‌ನಷ್ಟು ನೀರನ್ನು ನದಿ ಮತ್ತು ಕಾಲುವೆಗಳಿಗೆ ಹರಿಸಲಾಯಿತು. ಇದರಿಂದ ಹಂಪಿಯಲ್ಲಿ ಪುರಂದರ ಮಂಟಪ ಬಹುತೇಕ ಮುಳುಗಡೆಯಾಗಿದೆ.

105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಈ ಬಾರಿ 80 ಟಿಎಂಸಿ ಅಡಿಯಷ್ಟು ನೀರನ್ನು ಮಾತ್ರ ಸಂಗ್ರಹಿಸಿ ಇಡಲು ತುಂಗಭದ್ರಾ ಮಂಡಳಿ ನಿರ್ಧರಿಸಿದೆ. ಇನ್ನಷ್ಟು ಕ್ರೆಸ್ಟ್‌ಗೇಟ್‌ಗಳನ್ನು ತೆರೆದು ನೀರು ಹೊರಬಿಡುವ ಸಾಧ್ಯತೆ ಇದೆ. ನದಿ ದಂಡೆಯ ಜನರು ಎಚ್ಚರದಿಂದ ಇರಬೇಕು ಎಂದು ಮಂಡಳಿ ಎಚ್ಚರಿಕೆ ನೀಡಿದೆ.

ಕಳೆದ ವರ್ಷ ಜುಲೈ 3ನೇ ವಾರ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಆಗ ಕ್ರೆಸ್ಟ್‌ಗೇಟ್‌ಗಳನ್ನು ಹಂತ ಹಂತವಾಗಿ ತೆರೆದು ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗಿತ್ತು. ಆದರೆ, ಕ್ರಸ್ಟ್‌ಗೇಟ್‌ಗಳು ಶಿಥಿಲಗೊಂಡಿವೆ. ಅವುಗಳನ್ನು ಬದಲಿಸುವಂತೆ ತಜ್ಞರು ವರದಿ ನೀಡಿದ ಕಾರಣ ಈ ಬಾರಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸದಿರಲು ನಿರ್ಧರಿಸಲಾಗಿದೆ. ಹೀಗಾಗಿ 20 ಕ್ರೆಸ್ಟ್‌ಗೇಟ್‌ಗಳನ್ನು ತಲಾ 2.5 ಅಡಿಯಷ್ಟು ಎತ್ತಿ ನೀರು ಹೊರಬಿಡಲಾಗುತ್ತಿದೆ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!