ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೋಗೆ ಕಾಲುವೆ, ಆದೋನಿ ಮಸೀದಿ ಕಾಲುವೆ ಹಾಗೂ ಶಂಭುಲಿಂಗೇಶ್ವರ ಶಾಲೆ ಹಿಂಭಾಗದ ಕಾಲುವೆಯಲ್ಲಿ ಮೊಸಳೆಗಳ ಚಲನವಲನ, ಮೊಸಳೆ ಸೆರೆಗೆ ಅರಣ್ಯ ಇಲಾಖೆ ಭರವಸೆ

ಬಳ್ಳಾರಿ/ ಕಂಪ್ಲಿ: ಕಂಪ್ಲಿ ಪಟ್ಟಣದ 2ನೇ ವಾರ್ಡ್ ನ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ, ಸ್ಥಳೀಯರ ಮೊಬೈಲ್ ನಲ್ಲಿ ಸೆರೆ.

ಪಟ್ಟಣದ 2ನೇ ವಾರ್ಡ್ ನಲ್ಲಿ ಇರುವ ಕಾಲುವೆಯ ದಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿ‌ ಮಾಡಿದೆ.

ಕಳೆದ ವಾರ ಸಹ ಮೊಸಳೆಯೊಂದು ಇದೇ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ಅದರ ಬೆನ್ನಲ್ಲೇ ಇಂದು ಮತ್ತೊಂದು ಮೊಸಳೆ ಕಾಣಿಸಿಕೊಂಡಿದೆ.

ಸ್ಥಳೀಯರು ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಸುಮಾರು 3 ಮೊಸಳೆಗಳನ್ನು ನಾವು ನೋಡಿದ್ದೇವೆ, ಇದು ಜನವಸತಿ ಪ್ರದೇಶವಾಗಿದ್ದು, ಪಕ್ಕದಲ್ಲೇ ಮಸಿದಿ ಶಾಲೆಗಳು ಇದ್ದು, ಪ್ರತಿನಿತ್ಯ ಮಕ್ಕಳು, ಮಹಿಳೆಯರು ಸಂಚಾರಿಸುವ ಮಾರ್ಗವಾಗಿದ್ದು, ಸದ್ಯ ಮೊಸಳೆಯ ಪ್ರತ್ಯಕ್ಷತೆಯಿಂದ ಆತಂಕದಲ್ಲಿದ್ದಾರೆ ಎಂದರು.

ಇನ್ನು ಸಂಬಂಧಿಸಿದ ಅರಣ್ಯ ಇಲಾಖೆಯವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಮೊಸಳೆಯನ್ನು ಸ್ಥಳಾಂತರಿಸಬೇಕಾಗಿದೆ ಎಂಬ ಸ್ಥಳೀಯ ಮನವಿಗೆ ಅರಣ್ಯ ಇಲಾಖೆಯು ಸ್ಪಂದಿಸಿ, ಶೀಘ್ರದಲ್ಲೇ ಮೊಸಳೆಗಳನ್ನು ಹಿಡಿಯುವ ಕಾರ್ಯಚರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!