ಯಾದಗಿರಿ : ನಂಬಿಕೆಗೆ ಇನ್ನೊಂದು ಹೆಸರೇ ಎಸ್.ಪಿ ಪೃಥ್ವಿಕ್ ಶಂಕರ್, ಬಂದ ಏಳು ತಿಂಗಳಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷ ಅಧಿಕಾರಿ ಪೃಥ್ವಿಕ್ ಶಂಕರ್ ಅವರಿಗೆ ಕೇವಲ 7 ತಿಂಗಳಲ್ಲೇ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಳ್ಳರಿಗೆ, ಅಕ್ರಮ ದಂಧೆಕೋರರಿಗೆ ಸಿಂಹಸ್ವಪ್ನವಾಗಿ ಕಾಡಿದ ಖಡಕ್ ಅಧಿಕಾರಿ ಏಕೈಕ ವ್ಯಕ್ತಿ ಎಂದರೆ ಅವರೇ ಎಸ್.ಪಿ ಯವರು, ಭ್ರಷ್ಟ ರಾಜಕಾರಣಿಗಳಿಗೂ ಹಾಗೂ ಪೋಲಿಸ್ ಅಧಿಕಾರಿ ಮಗ್ಗುಲ ಮುಳ್ಳಾಗಿದ್ದರು ಎಂದು ಇಲಾಖೆಯ ವಲಯದಲ್ಲಿ ಕೇಳಿಬಂದಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡು ಎಸ್.ಪಿ ಪೃಥ್ವಿಕ್ ಶಂಕರ್ ವರ್ಗಾವಣೆಗೆ ಮುಂದಾದ ಸರ್ಕಾರ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರ್ಗಾವಣೆ ಆದೇಶ ಹಿಂಪಡೆಯಬೇಕು ಎಂದು ಶ್ರೀ ಸರ್ವಜ್ಞ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷರು ಸಂಗಮೇಶ ಕುಂಬಾರ ಶಹಾಪುರ ಯವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾಡಿದ್ದಾರೆ.
ಅಕ್ರಮ ಚಟುವಟಿಕೆಗಳಿಗೆ ವಿರುದ್ಧ ಕ್ರಮ ಕೈಗೊಂಡಿದ್ದ ಖಡಕ್ ಎಸ್.ಪಿ ಪೃಥ್ವಿಕ್ ಶಂಕರ್ ಅವರನ್ನು ಏಳೇ ತಿಂಗಳಲ್ಲೇ ರಾಜ್ಯ ಸರ್ಕಾರ ವರ್ಗಾವಣೆಗೆ ಮುಂದಾಗಿದೆ ಎಂಬ ಸುದ್ದಿ ಯಾದಗಿರಿ ಜಿಲ್ಲೆಯಾದ್ಯಂತ ಹರಡುತ್ತಿದ್ದಂತೆ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಕ್ಕರೆಯ ನಾಡು ಮಂಡ್ಯ ಜಿಲ್ಲೆಯ ಖಡಕ್ ಐಪಿಎಸ್ ಅಧಿಕಾರಿ ಪೃಥ್ವಿಕ್ ಶಂಕರ್, ಯಾದಗಿರಿಯ ಎಸ್.ಪಿ ಯಾಗಿ ನೇಮಕಗೊಂಡು ಕೆಲವೇ ತಿಂಗಳಲ್ಲಿ ಇಸ್ಪೀಟ್, ಮಟ್ಕಾ, ಅಕ್ರಮ ಮರಳುಗಾರಿಕೆ ಹಾಗೂ ಕೋಳಿ ಅಂಕಣಗಳ ಮೇಲೆ ನಿಷೇಧ ಹೇರಿದ್ದರು. ಅಧಿಕಾರ ಸ್ವೀಕರಿಸಿದ ದಿನದಿಂದಲೇ ಅಕ್ರಮಗಳ ವಿರುದ್ದ ಕಾರ್ಯಾಚರಣೆ ಆರಂಭಿಸಿದ್ದರಿಂದಲೇ ಅಕ್ರಮ ದಂಧೆಕೋರರಿಗೆ ಭಯ ಮೂಡಿಸಿದ್ದರು.
- ಕರುನಾಡ ಕಂದ



















