ಕಲಬುರಗಿ : ಜುಲೈ 10 ರಂದು ಕಡ್ಲಿಗಾರ ಹುಣ್ಣಿಮೆಯ ಗುರು ಪೂರ್ಣಿಮೆಯ ದಿನದಂದು ತಿಮ್ಮಾಪೂರ ಸರ್ಕಲ್ ಪಕ್ಕದಲ್ಲಿ ಇರುವ ಸುವರ್ಣ ಸಭಾ ಭವನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ನಿಜಸುಖಿ ಹಡಪದ ಅಪ್ಪಣ್ಣ ನವರ 891 ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಜಯಂತೋತ್ಸವ ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ತೋನಸನಹಳ್ಳಿ ಮತ್ತು ಕಾರ್ಯದರ್ಶಿ ರಮೇಶ್ ಹಡಪದ ಕರಾರಿ ಹಾಗೂ ತಾಲ್ಲೂಕು ಪದಾಧಿಕಾರಿಗಳು ಅವರನ್ನು ಜವಾಬ್ದಾರಿ ಆಯೋಜಿಸುವ ಮೂಲಕ ೧೨ನೇ ಶತಮಾನದ ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಮತ್ತು ವಚನಕಾರ ಹಡಪದ ಅಪ್ಪಣ್ಣ ನವರ 891 ನೇ ಜಯಂತಿ ಕಾರ್ಯಕ್ರಮ ಸಂಭ್ರಮದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸ್ವಾಮಿಗಳು ಮತ್ತು ಅನೇಕ ರಾಜಕೀಯ ಪಕ್ಷಗಳ ಮುಖಂಡರು , ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಮಾಜದ ಉದ್ಯಮಿಗಳು ಭಾಗವಹಿಸಲಿದ್ದಾರೆ. ಹಾಗಾಗಿ ಕಲಬುರಗಿ ಜಿಲ್ಲೆಯ ನಗರದ ಮತ್ತು ತಾಲ್ಲೂಕು ಹಡಪದ ಅಪ್ಪಣ್ಣ ಸಮಾಜದ ಬಂಧುಗಳು, ಅಂಗಡಿ ಮಾಲೀಕರು,ಮಹಿಳಾ ತಾಯಂದಿರು ಹೆಚ್ಚಿನ ಜನಸಂಖ್ಯೆಯಲ್ಲಿ ಸಮಾಜದ ಬಂಧುಗಳು ಈ ಸುವರ್ಣ ಸಭಾ ಭವನ ಕನ್ನಡ ಸಾಹಿತ್ಯ ಪರಿಷತ್ ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ನವರ ಜಯಂತೋತ್ಸವ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ಶ್ರೀ ಬಸವರಾಜ ಹಡಪದ ಸುಗೂರ ಎನ್ ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷರು ತಿಳಿಸಿದರು. ಇದೇ ಸಂಧರ್ಭದಲ್ಲಿ ಕಲಬುರಗಿ ಜಿಲ್ಲೆಯ ಅಧ್ಯಕ್ಷರು ಈರಣ್ಣ ಸಿ ಹಡಪದ ಸಣ್ಣೂರ ಮತ್ತು ಕಲಬುರಗಿ ಜಿಲ್ಲೆಯ ಕಾರ್ಯಾಧ್ಯಕ್ಷ ಭಗವಂತ ಶಿಕ್ಷಕರು ಕಿರಣಗಿ, ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ್ ಹಡಪದ ನೀಲೂರ ಮತ್ತು ಜಿಲ್ಲಾ ಉಪಾಧ್ಯಕ್ಷ ರುದ್ರಮಣಿ ಅಪ್ಪಣ್ಣ ಬಟಗೇರಾ ಜಿಲ್ಲಾ ಖಜಾಂಚಿ ಶಿವಾನಂದ ಹಡಪದ ಬಬಲಾದಿ ಹಾಗೂ ಮಲ್ಲಿಕಾರ್ಜುನ ಹಡಪದ ಸಾವಳಗಿ ಕಲಬುರಗಿ ನಗರ ಘಟಕ ಅಧ್ಯಕ್ಷರು ಸೇರಿದಂತೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಇದ್ದರು.
- ಕರುನಾಡ ಕಂದ



















