ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಜೆಪಿ ಹೋರಾಟಕ್ಕೆ ಜಯ ಮರತೂರಕರ್ ಹರ್ಷ

ಕಲಬುರಗಿ: ಬಡ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜನರಿಕ್ ಔಷಧಗಳನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಬೇಕೆಂದು ವಿನಾಃ ಕಾರಣ ಆದೇಶ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಮೆಡಿಕಲ್ ಮಾಫಿಯಾಗೆ ಅವಕಾಶ ನೀಡಲು, ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿರುವ ಕಾಂಗ್ರೆಸ್ ಸರ್ಕಾರದ ಲೂಟಿಕೋರ ನೀತಿಗೆ ಇದರಿಂದ ಮುಖಭಂಗವಾಗಿದೆ ಎಂದು ಅವರು ಟೀಕಿಸಿದರು. ಇದರಿಂದ ಬಿಜೆಪಿಯ ಹೋರಾಟಕ್ಕೆ ಜಯ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಜನಪರ ಯೋಜನೆಯನ್ನು ರಾಜಕೀಯ ಕಾರಣಕ್ಕೆ ನಿಲ್ಲಿಸುವ ದುರ್ಬುದ್ಧಿಯನ್ನು ಕಾಂಗ್ರೆಸ್ ಸರ್ಕಾರ ಇನ್ನಾದರೂ ಬಿಡಬೇಕು ಎಂದು ಅವರು ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!