ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮ ಲೆಕ್ಕಧಿಕಾರಿಗಳಿಗೆ ಶಾಸಕರಿಂದ ಲ್ಯಾಪ್‌ಟಾಪ್ ವಿತರಣೆ

ಯಾದಗಿರಿ | ಗುರುಮಠಕಲ್: ಗ್ರಾಮ ಲೆಕ್ಕಾಧಿಕಾರಿಗಳಿಗೆ ಸರಕಾರದ ವತಿಯಿಂದ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಶಾಸಕ ಶರಣಗೌಡ ಕಂದಕೂರ ಸೂಚಿಸಿದರು.

ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಗ್ರಾಮ ಮಟ್ಟದ ಆಡಳಿತ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಉಚಿತ ಲ್ಯಾಪ್ ಟಾಪ್ ವಿತರಿಸಲಾಗಿದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಡಿಜಿಟಲೀಕರಣಕ್ಕೆ ಪೂರಕವಾಗಿದ್ದು ಗ್ರಾಮ ಮಟ್ಟದ ಆಡಳಿತದಲ್ಲಿ ತಾಂತ್ರಿಕ ಸಾಮರ್ಥ್ಯ ಹೆಚ್ಚಿಸಿ ಯಾದಗಿರಿ ಜಿಲ್ಲೆ ಇನ್ನೆರಡು ತಿಂಗಳಿನಲ್ಲಿ ಮೊಟ್ಟ ಮೊದಲ ಸ್ಥಾನದಲ್ಲಿ ಇರಲು ಪ್ರಾಮಾಣಿಕ ಪ್ರಯತ್ನ ಮಾಡಿ ಹಾಗೂ ಹಳ್ಳಿ ಜನ ಅಲೆದಾಟ ತಪ್ಪಿಸಿ ಎಂದು ಎಲ್ಲಾ ಗ್ರಾಮಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರು ತಾಲೂಕ ವಿಕಲಚೇತನರ ಕುಂದು ಕೊರತೆಗಳ ಕುರಿತು ಹಾಗೂ ವಿಕಲ ಚೇತನರ ಹಕ್ಕು ಒತ್ತಾಯದ ಸಮಾವೇಶ ಕುರಿತು RPD ಟಾಸ್ಕ ಸದಸ್ಯರೊಡನೆ ಸಮಾಲೋಚನೆ ಮಾಡಿದರು, ವಿಕಲ ಚೇತನರ ಸಮಸ್ಯೆಗಳಿಗೆ ಶೀಘ್ರವೇ ಪರಿಹರಿಸಲು ತಾಲೂಕ ದಂಡಾಧೀಕಾರಿಗಳಿಗೆ ಸೂಚನೆ ನೀಡಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!