ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿ. ಪಿ. ಐ ಅಲಿಸಾಬ್ ಅವರ ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಗೆ ಎಸ್. ಪಿ. ಯವರ ಶ್ಲಾಘನೆ

ಬೀದರ ಜಿಲ್ಲೆಯ ಬಸವಕಲ್ಯಾಣ ನಗರ ವೃತ್ತ ಸಿ.ಪಿ.ಐ ಅಲಿಸಾಬ್‌ ಅವರ ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಗೆ
ಬೀದರ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇಂದು ಬೀದರ್ ಬಸವಕಲ್ಯಾಣ ನಗರ ವೃತ್ತ ಸಿ.ಪಿ.ಐ ಶ್ರೀ ಅಲಿಸಾಬ ರವರು ತರಬೇತಿ ನಿಮಿತ್ತವಾಗಿ ಕಲಬುರಗಿಗೆ ಹೋಗುತ್ತಿದ್ದಾಗ ರಾಜೇಶ್ವರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ವಾಹನ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತ ಪಟ್ಟು, ಇನ್ನೋರ್ವ ವ್ಯಕ್ತಿ ತೀವ್ರ ಗಾಯಗೊಂಡು ನರಳುತ್ತಿರುವುದನ್ನು ಗಮನಿಸಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಅಲ್ಲಿ ನೆರೆದ ಜನರ ಸಹಾಯದಿಂದ ಗಾಯಾಳುವಿಗೆ ತಮ್ಮ ಪೊಲೀಸ್ ಜೀಪಿನಲ್ಲಿ ಕರೆದುಕೊಂಡು ಚಿಕಿತ್ಸೆಗಾಗಿ ಹುಮನಾಬಾದ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯಂತೆ ಬೀದರಿನ ಬ್ರೀಮ್ಸ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿಕೊಟ್ಟಿರುತ್ತಾರೆ.
ಒಂದು ಪ್ರಾಣದ ಮೌಲ್ಯವನ್ನು ಅರಿತು ಕಾಯಕವೇ ಕೈಲಾಸ ಎಂಬಂತೆ ತಮ್ಮ ಕರ್ತವ್ಯ ನಿಷ್ಠೆ, ನಿಸ್ವಾರ್ಥ ಸೇವೆ ಸಲ್ಲಿಸಿ, ಒಂದು ಪ್ರಾಣ ಕಾಪಾಡುವಲ್ಲಿ ಮಾನವೀಯತೆ ಮೆರೆದ ಬಸವಕಲ್ಯಾಣ ನಗರ ಸಿ.ಪಿ.ಐ ಶ್ರೀ ಅಲಿಸಾಬ ರವರಿಗೆ ಮತ್ತು ಅವರೊಂದಿಗೆ ಕೈ ಜೋಡಿಸಿದ ಯುವಕರಿಗೆ ಸಮಸ್ತ ಬೀದರ ಜಿಲ್ಲಾ ಪೊಲೀಸರಿಂದ ಅಭಿನಂದನೆಗಳು. ಅವರ ಈ ಕರ್ತವ್ಯ ನಿಷ್ಠೆ ಮತ್ತು ನಿಸ್ವಾರ್ಥ ಸೇವೆ ಪ್ರತಿಯೊಬ್ಬರಿಗೂ ಪ್ರೇರಣೆಯಾಗಲಿ ಎಂದು ಕೋರುತ್ತಾ ಅದೇ ರೀತಿ ಗಾಯಾಳು ಬೇಗನೆ ಗುಣಮುಖರಾಗಲೆಂದು ಹಾರೈಸುತ್ತಾ ಜಿಲ್ಲೆಯ ನಾಗರೀಕರಲ್ಲಿ ಬೀದರ ಜಿಲ್ಲಾ ಪೊಲೀಸ್ ರಿಂದ ವಿನಂತಿ ಏನೆಂದರೆ, ತಾವು ದ್ವಿಚಕ್ರ ವಾಹನದ ಮೇಲೆ ಸಂಚರಿಸುವಾಗ ಹೆಲ್ಮೆಟ್ ಧರಿಸಿ, ನಾಲ್ಕು ಚಕ್ರ ವಾಹನ ಚಾಲಕರು ಸೀಟ್ ಬೆಲ್ಟ್ ಧರಿಸಿ, ವೇಗದ ಮಿತಿಯಲ್ಲಿ ವಾಹನ ಚಲಾಯಿಸಿ, ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಿ, ತಮ್ಮ ಮತ್ತು ಇತರರ ಪ್ರಾಣ ರಕ್ಷಣೆ ಮಾಡಿಕೊಳ್ಳಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ಐ.ಪಿ.ಎಸ್, ರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುತ್ತಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!