ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಗವಾಡದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ|| ಕಾಗವಾಡ ನಗರದಲ್ಲಿ ಆರೋಗ್ಯ ಸಚಿವ ಶ್ರೀ ಜೆ ಪಿ ನಡ್ಡಾ ರಾಜ್ಯಸಭೆಗೆ ಮಾಹಿತಿ ನೀಡಿರುವಂತೆ ರಾಷ್ಟ್ರೀಯ ಆರೋಗ್ಯ ಮಿಷನ್ ನ ಮಿಷನ್ ಸ್ಟೀರಿಂಗ್ ಗ್ರೂಪ್ ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ನಿರ್ದೇಶಿಸಿದೆ ಮತ್ತು ಸರ್ಕಾರ ಈ ನಿಟ್ಟಿನಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದಂತೆ ಕೂಡಲೇ ಕೇಂದ್ರದಿಂದ ಆದೇಶಿಸಬೇಕು ಮತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ಫೆಡರೇಶನ್ ಗಳ ಕರೆಯ ಮೇರೆಗೆ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಜನವಿರೋಧಿ ಹಾಗೂ ಕಾರ್ಪೊರೇಟ್ ಪರವಾದ ನೀತಿಗಳನ್ನು ಹಿಂಪಡೆಯಲು ಆಗ್ರಹಿಸಿ ಜುಲೈ 9 -2025 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಕಾಗವಾಡದಲ್ಲಿ ಆಶಾ ಕಾರ್ಯಕರ್ತೆಯರು ನಡೆಸಿದರು.

ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ ಶಿಕ್ಷಣ ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳಸ್ತರದ ಜನತೆಗೆ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಮಿಕರು ಕಳೆದ ಹಲವಾರು ದಶಗಳಿಂದ ಅತ್ಯಂತ ನಿಕೃಷ್ಟ ಸೇವೆ ಸಲ್ಲಿಸುತ್ತಿರುವರು. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಗೌರವಧನ, ಪ್ರೋತ್ಸಾಹಧನದ ಹೆಸರಿನಲ್ಲಿ ದೇಶದ ಲಕ್ಷಾಂತರ ಮಹಿಳಾ ಕಾರ್ಮಿಕರನ್ನು ಕಾರ್ಯಕರ್ತೆಯರೆಂದು ಸೇವೆ ಪಡೆದುಕೊಳ್ಳುತ್ತಾ ಕಾರ್ಮಿಕ ಹಕ್ಕುಗಳಿಂದ ವಂಚಿತರನ್ನಾಗಿ ಮಾಡಿದವರು. ಕನಿಷ್ಠ ವೇತನ, ಸೇವಾ ಭದ್ರತೆ ಇಲ್ಲದೆ ಹಗಲು ಇರುಳು ಸೇವೆ ಸಲ್ಲಿಸುತ್ತಿರುವರು, ಸರ್ಕಾರ ಇವರ ಸೇವೆಗೆ ತಕ್ಕ ಪ್ರತಿಫಲ ನೀಡುವುದಿರಲಿ, ದುಡಿದಷ್ಟು ವೇತನ ನೀಡದೆ ಈ ಬಡ ಹೆಣ್ಣು ಮಕ್ಕಳನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿವೆ.
ರಾಷ್ಟ್ರದ ತಳಮಟ್ಟದಲ್ಲಿ ಸದಾ ಸೇವೆಗೆ ಸಿದ್ದರಿರುವ ಈ ಮಹಿಳಾ ಕಾರ್ಮಿಕರಿಗೆ ಕೇಂದ್ರ ಸರ್ಕಾರದ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸಿ ಖಾಯಂ ಮಾಡಬೇಕು.

ಆಶಾ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದಾರೆ ಮತ್ತು ತಳಮಟ್ಟದಲ್ಲಿ ಅವರ ಪ್ರಯತ್ನಗಳು ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ ಮತ್ತು 5 ವರ್ಷದೊಳಗಿನ ಮರಣ ಪ್ರಮಾಣ ಕಡಿಮೆ ಮಾಡುವುದರಲ್ಲಿ ಸಹಾಯ ಮಾಡಿವೆ ಎಂದು ಶ್ರೀ ಜೆ ಪಿ ನಡ್ಡಾ ಸಂಪೂರ್ಣವಾಗಿ ಕೃತಜ್ಞನಾಗಿದ್ದೇನೆ ಎನ್ನುತ್ತಾ, ಒಂದು ವಾರದ ಹಿಂದೆ NHM ನ ಮಿಷನ್ ಸ್ಟೀರಿಂಗ್ ಗ್ರೂಪ್ ಸಭೆ ಸೇರಿತ್ತು. ಆಶಾ ಕಾರ್ಯಕರ್ತೆಯರು ತಮ್ಮ ಚಟುವಟಿಕೆಗಳಿಂದಾಗಿ ಅವರ ಆರ್ಥಿಕ ಪಾಲನ್ನು ಹೆಚ್ಚಿಸಬೇಕು ಎಂದು ನಾವು ಖಚಿತಪಡಿಸಿಕೊಂಡಿದ್ದೇವೆ. ಇದನ್ನು ಮಿಷನ್ ಸ್ಟಿರಿಂಗ್ ಗ್ರೂಪ್ ಅನುಮತಿಸಿದೆ ಮತ್ತು ನಾವು ಈ ನಿಟ್ಟಿನಲ್ಲಿ ಮುಂದುವರೆಯುತ್ತೇವೆ” ಎಂದು ಶ್ರೀ ಜೆ ಪಿ ನಡ್ದಾ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ರಾಷ್ಟ್ರದ ಆಶಾ ಕಾರ್ಯಕರ್ತೆಯರಿಗೆ ಕೂಡಲೇ ಪ್ರೋತ್ಸಾಹಧನದ ಹೆಚ್ಚಳದ ಆದೇಶವನ್ನು ಮಾಡಿ ಅಗತ್ಯ ಆರ್ಥಿಕ ಅನುದಾನವನ್ನು ನೀಡಲು ಈ ದಿನದಂದು ರಾಜ್ಯದ ಕರ್ನಾಟಕ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೂ ಹಾಗೂ ಕೇಂದ್ರ ಆರೋಗ್ಯ ಮಂತ್ರಿಗಳಾದ ಶ್ರೀ ಜೆ.ಪಿ. ನಡ್ಡಾ ಅವರಿಗೂ ಕೇಂದ್ರ ಸರ್ಕಾರಕ್ಕೂ ಈ ಮೂಲಕ ಆಗ್ರಹಿಸಿ ಕಾಗವಾಡ ತಹಶೀಲ್ದಾರರು ಹಾಗೂ ದಂಡಾಧಿಕಾರಿಗಳಾದ ರವೀಂದ್ರ ಹಾದಿಮನಿ ಇವರಿಗೆ ಮನವಿ ಪತ್ರ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರ ಹಕ್ಕೊತ್ತಾಯಗಳು

ಆಶಾ, ಅಂಗನವಾಡಿ, ಬಿಸಿ ಊಟ ಮತ್ತು ಇತರ ಸ್ಕೀಮ್ ವರ್ಕರ್ ಗಳ ಸೇವೆಯನ್ನು ಖಾಯಂ ಮಾಡಿ ಅಲ್ಲಿಯವರೆಗೆ ಐ ಎಲ್ ಸಿ ಶಿಫಾರಸ್ಸಿನಂತೆ ಸ್ಕೀಮ್ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ. ಕನಿಷ್ಠ 28,000 ಮಾಸಿಕ ವೇತನ ಜಾರಿ ಮಾಡಿ ಆಶಾ ಅಂಗನವಾಡಿ ಬಿಸಿಯೂಟ ಮತ್ತು ಇತರ ಸ್ಕೀಮ್ ವರ್ಕರ್ ಗಳಿಗೆ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸಿ.

ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ

ಯಾವುದೇ ರೂಪದಲ್ಲಿ ಖಾಸಗಿಕರಣ ಬೇಡ ಮತ್ತು ಎನ್ ಎಂ ಪಿ ಯನ್ನು ರದ್ದು ಮಾಡಿ.

ನರೇಗಾಗೆ ಹೆಚ್ಚಿನ ಅನುದಾನ ನೀಡಿ ಮತ್ತು ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಿಸಿ.

ಗುತ್ತಿಗೆ ಹೊರಗುತ್ತಿಗೆ ಸೇರಿದಂತೆ ಎಲ್ಲಾ ಅನೌಪಚಾರಿಕ ವಲಯದ ಕಾರ್ಮಿಕರ ಸೇವೆಯನ್ನು ಖಾಯಂ ಮಾಡಿ.

ಬೆಲೆ ಏರಿಕೆಯನ್ನು ನಿಗ್ರಹಿಸಲು ದೃಢವಾದ ಪರಿಹಾರ ಕ್ರಮಗಳನ್ನು ಘೋಷಿಸಿ.

ಎನ್ ಪಿ ಎಸ್. ಯು ಪಿ ಎಸ್ ಬೇಡ ಹಳೆಯ ಪದ್ಧತಿ ಓ ಪಿ ಎಸ್ ಅನ್ನು ಮುಂದುವರಿಸಿ.

ವಿದ್ಯುತ್ ತಿದ್ದುಪಡಿ ಮಸೂದೆ 2023 ರನ್ನು ಕೈಬಿಡಿ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ನಿಲ್ಲಿಸಿ.

ಪ್ರತಿ ದಿನ 8 ಗಂಟೆ ಅವಧಿಗೆ ಮೀರದಂತೆ ಕಾರ್ಮಿಕರ ಕೆಲಸದ ಅವಧಿಯನ್ನು ಖಚಿತಪಡಿಸಿ. ಮಹಿಳೆಯರಿಗೆ ರಾತ್ರಿ ಪಾಳಿ ಬೇಡವೇ ಬೇಡ.

ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು.

ಈ ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರಾದ ಸುಜಾತಾ ಕಾಡಮಠ ,ಮಯೂರಾ ಶೆಟ್ಟಿ ,
ರೂಪಾ ಚರಾಟೆ ,ಕಾವೇರಿ ಮಧಾಳೆ ,ಕಸ್ತೂರಿ ಕೋಳಿ
ಗೀತಾ ಮಾದಿಗರ, ಮಾಲಾಶ್ರೀ ಅನಗಲ್ಲಿ,ಮಂಜುಳಾ ಜಕಾತಿ ಸೇರಿದಂತೆ ಕಾಗವಾಡ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ವರದಿ. ವಿಠ್ಠಲ ಖೋಕಾಟೆ ಅಥಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!