ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಾತಿ ನಿಂದನೆ ಪ್ರಕರಣಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ , ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡ ತಂದೆ ಹೃದಯಾಘಾತದಿಂದ ಸಾವು.

ಯಾದಗಿರಿ :ಜಿಲ್ಲೆಯ ವಡಗೇರಾ ಪಟ್ಟಣದ 22 ವರ್ಷದ ಮಹೆಬೂಬ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಆತನ ತಂದೆ 50 ವರ್ಷದ ಸೈಯದ್ ಅಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದ ಹಿಂದೆ ಜಮೀನಿನಲ್ಲಿ ದಾರಿ ವಿಚಾರವಾಗಿ ಮಹೆಬೂಬ್ ದಲಿತ ಕುಟುಂಬವೊಂದರೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ. ಈ ಜಗಳವನ್ನು ಹಿರಿಯರು ನ್ಯಾಯ ಪಂಚಾಯಿತಿ ಮೂಲಕ ಬಗೆಹರಿಸಿದ್ದರು.

ಆದರೆ, ಬೇರೆ ಊರಿನಿಂದ ಬಂದ ದಲಿತ ಮುಖಂಡನೊಬ್ಬ ಮಹೆಬೂಬ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಲು ಮುಂದಾಗಿದ್ದಾನೆ. “ಜಾತಿ ನಿಂದನೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುತ್ತೇನೆ” ಎಂದು ಆ ಮುಖಂಡ ಮಹೆಬೂಬ್‌ಗೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಆತ್ಮಹತ್ಯೆ ಮತ್ತು ತಂದೆಯ ಸಾವು ಈ ಬೆದರಿಕೆಯಿಂದ ವಿಚಲಿತನಾದ ಮಹೆಬೂಬ್, ಕೇಸ್ ದಾಖಲಾದರೆ ಮಾನ ಮರ್ಯಾದೆ ಹೋಗುತ್ತದೆ ಮತ್ತು ಜೈಲಿಗೆ ಹೋಗಬೇಕಾಗುತ್ತದೆ ಎಂದು ಹೆದರಿ, ನಿನ್ನೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಆತ್ಮಹತ್ಯೆ ಸುದ್ದಿ ಕೇಳಿ ತೀವ್ರ ಆಘಾತಕ್ಕೆ ಒಳಗಾದ ತಂದೆ ಸೈಯದ್ ಅಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ, ಚಿಕಿತ್ಸೆ ಫಲಕಾರಿಯಾಗದೆ ಸೈಯದ್ ಅಲಿ ಕೂಡಾ ಸಾವನ್ನಪ್ಪಿದ್ದಾರೆ.

ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!