ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನರೇಗಾ ಹೊರ ಗುತ್ತಿಗೆ ಸಿಬ್ಬಂದಿಗಳ ಪ್ರತಿಭಟನೆ

ಬಾಗಲಕೋಟೆ : ದಿನಾಂಕ 11 -7-2025 ರಂದು, ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ( ರಿ.) ಬೆಂಗಳೂರು, ರಾಜ್ಯ ಬೇರ್ ಫೂಟ್ ಟೆಕ್ನಿಷಿಯನ್ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಜಿಲ್ಲಾ ಘಟಕ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ನರೇಗಾ ಹೊರ ಗುತ್ತಿಗೆ ಸಿಬ್ಬಂದಿಗಳ ಪ್ರತಿಭಟನೆ ಜರುಗಿತು.
ನರೇಗಾ ಹೊರ ಗುತ್ತಿಗೆ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆಗಳು, ಆರು ತಿಂಗಳ ವೇತನ ಪಾವತಿ ಮಾಡದೆ ಇರುವುದು, ಎಲ್ಲಾ ನೌಕರರಿಗೂ ಸೇವಾ ಭದ್ರತೆ ಒದಗಿಸುವುದು, ನರೇಗಾದ ಎಲ್ಲಾ ನೌಕರರಿಗೆ ಆರೋಗ್ಯ ವಿಮೆ ತ್ವರಿತವಾಗಿ ಅನುಷ್ಠಾನ ಮಾಡವುದು ಸೇರಿದಂತೆ ಒಡಿಸಾ, ಆಂಧ್ರ ಪ್ರದೇಶ, ತೆಲಂಗಾಣ, ಜಾರ್ಖಂಡ್, ಪಂಜಾಬ್ ಸೇರಿದಂತೆ ಇತರ ರಾಜ್ಯಗಳಲ್ಲಿ ನರೇಗಾ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿಗಳನ್ನು ಕಾಯಂಗೊಳಿಸಿದ್ದು, ನಮ್ಮ ರಾಜ್ಯದಲ್ಲಿ ಈ ರಾಜ್ಯಗಳ ಮಾದರಿಯೇ ಅನುಸರಿಸಬೇಕು, ಕೇಂದ್ರ ಸರ್ಕಾರವು ಆಡಳಿತಾತ್ಮಕ ಅನುದಾನವನ್ನು 6% ಬಿಡುಗಡೆ ಮಾಡಿದರೂ ಕರ್ನಾಟಕ ಸರ್ಕಾರ 3.5 ರಿಂದ 4.0% ಮಾತ್ರ ವೆಚ್ಚವನ್ನು ಮಾಡುತ್ತಿದ್ದು, ಉಳಿದ ಅನುದಾನವನ್ನು ಕೇಂದ್ರ ಸರ್ಕಾರಕ್ಕೆ ವಾಪಸ್ ನೀಡಲಾಗುತ್ತಿದೆ, ಸರ್ಕಾರಿ ನೌಕರಿಗೆ ಇರುವ ಹಾಗೆ ನಮಗೂ ಕೂಡಾ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸ್ಯಾಲರಿ ಖಾತೆಗಳನ್ನು ಮಾಡಿಸಿಕೊಡಬೇಕು, ಪ್ರಯಾಣ ಭತ್ಯೆ ಈಗ ನೀಡುತ್ತಿರುವ 2000 ಇದನ್ನು ಸಹ ಪರಿಸ್ಕರಿಸಬೇಕು ಎಂದು ನರೇಗಾ ಹೊರಗುತ್ತಿಗೆ ನೌಕರರು ಪ್ರತಿಭಟಿಸಿದರು.

ವರದಿ ಶೇಖಪ್ಪ ಬಾಳಿಕಾಯಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!