ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಆರೋಗ್ಯ ಜಾಗೃತಿ ಜಾಥಾ ಕಾರ್ಯಕ್ರಮ

ಬಳ್ಳಾರಿ/ ಕಂಪ್ಲಿ : ವಿಶ್ವ ಜನಸಂಖ್ಯಾ ದಿನವು ಪ್ರತಿ ವರ್ಷ ಜುಲೈ 11 ರಂದು ಆಚರಿಸಲ್ಪಡುವ ವಾರ್ಷಿಕ ಕಾರ್ಯಕ್ರಮವಾಗಿದ್ದು , ಜಾಗತಿಕ ಜನಸಂಖ್ಯಾ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತದೆ .
ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕಂಪ್ಲಿ ಇವರ ಸಹಯೋಗದೊಂದಿಗೆ “ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಆರೋಗ್ಯ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಆರೋಗ್ಯ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಮಕ್ಕಳ ತಜ್ಞರಾದ ಡಾ. ಸಾಗರ್ ಚಾಲನೆ ನೀಡಿ ಮಾತನಾಡಿ ಜನಸಂಖ್ಯೆ ಬೆಳವಣಿಗೆಗೆ ಕಾರಣಗಳೇನು ಮತ್ತೆ ಅದಕ್ಕೆ ಪರಿಹಾರ ಕ್ರಮಗಳೇನು ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮೂರು ದಶಕಗಳಿಂದ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ವಿಶ್ವ ಜನಸಂಖ್ಯಾ ದಿನವನ್ನು ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಜನಸಂಖ್ಯಾ ಹೆಚ್ಚಳದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಾ. ಮಲ್ಲೇಶಪ್ಪ, ಡಾ. ವಿಶ್ವನಾಥ, ಡಾ. ಹಾರಿಕ, ಡಾ. ಶೋಭಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಮಹಾಲಕ್ಷ್ಮಿ p. h. c. o ಶಿವಕುಮಾರ ಆರೋಗ್ಯ ಮಿತ್ರ ಆಶಾ ಕಾರ್ಯಕರ್ತರು ಸಮುದಾಯದವರು ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!