ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

5 ಸಾವಿರಕ್ಕೆ ರಾಯಭಾಗದಲ್ಲಿ ಡೆಡ್ಲಿ ಮರ್ಡರ್ : ಸಿಂಗ‌ರ್ ಮಾರುತಿಯ ಬರ್ಬರ ಹತ್ಯೆ

ಬೆಳಗಾವಿ/ ರಾಯಬಾಗ : ಕೇವಲ ಐದು ಸಾವಿರ ರೂ. ಹಣಕ್ಕೆ ಯುವಕನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಾರುತಿ ಲಟ್ಟಿ ( 22 ) ಹತ್ಯೆಯಾದ ಯುವಕ ಕಳೆದ ನಾಲ್ಕು ದಿನಗಳ ಹಿಂದೆ ಸ್ನೇಹಿತರ ಜೊತೆ ಬೈಕ್ ಮೇಲೆ ತೆರಳುವ ವೇಳೆ 11 ಜನರ ತಂಡ ಬರ್ಬರವಾಗಿ ಹತ್ಯೆ ಮಾಡಿದ್ದು ನಂತರ ಯುವಕನ ಮೃತದೇಹದ ಮೇಲೆ ವಾಹನ ಚಲಾಯಿಸಿ ಕ್ರೌರ್ಯ ಮೆರೆದಿದ್ದಾರೆ. ಮೃತ ಯುವಕ ಮಾರುತಿ ಲಟ್ಟಿ ಕೆಲ ದಿನಗಳ ಹಿಂದೆ ಈರಪ್ಪ ಅಕ್ಕಿವಾಟೆ ಎಂಬಾತನ ಬಳಿ 50 ಸಾವಿರ ರೂ. ಸಾಲ ಪಡೆದಿದ್ದ. ಕೆಲಸಕ್ಕೆ ಬರುತ್ತೇನೆ ಎಂದು ಹೇಳಿದ್ದ ಮಾರುತಿ ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡು ಹಾಡುವ ಮೂಲಕ ಹೆಸರು ಗಳಿಸಿದ್ದ.ಕೆಲಸಕ್ಕೆ ಬರಲಾಗದೆ ಈತ 45 ಸಾವಿರ ಹಣವನ್ನು ವಾಪಸ್ ನೀಡಿದ್ದ. ಇನ್ನುಳಿದ ಐದು ಸಾವಿರ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಈರಪ್ಪ ಗ್ಯಾಂಗ್‌ ಕಟ್ಟಿಕೊಂಡು ಮಾರುತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಕುರಿತು ಸಿದ್ದರಾಮ ಒಡೆಯರ, ಹಾಗೂ ಆಕಾಶ ಪೂಜಾರಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!