ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಮಸ್ತೆ ದಿನಾಚರಣೆ ದಿನದಂದು ನೊಂದಾಯಿತ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ಹಾಗೂ ಸುರಕ್ಷಾ ಧರಿಸುಗಳ ವಿತರಣೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣ ಪಂಚಾಯಿತಿ ವತಿಯಿಂದ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ನಮಸ್ತೆ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳು ಎ ನಸ್ಸರುಲ್ಲಾ ರವರು ಮಾತನಾಡಿ ನಮಸ್ತೆ ಸ್ಕೀಮ್‌ ಅಡಿಯಲ್ಲಿ ನೊಂದಾಯಿತ ಪೌರಕಾರ್ಮಿಕರಿಗೆ ಆಯುಷ್ಮಾನ್‌ ಕಾರ್ಡ್‌ ಹಾಗೂ ಸುರಕ್ಷಾ ಧರಿಸುಗಳನ್ನು ವಿತರಿಸಲಾಯಿತು.

ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೌರಕಾರ್ಮಿಕರು ಸ್ವಚ್ಛತೆ ಕಾರ್ಯ ನಿರ್ವಹಿಸುತ್ತಿರುವಾಗ ಕಡ್ಡಾಯವಾಗಿ ಮಾಸ್ಕ್ , ಹ್ಯಾಂಡ್ ಗ್ಲೌಸ್, ಸುರಕ್ಷಾ ಧರಿಸುಗಳನ್ನು ಹಾಕಿಕೊಂಡು ಕಾರ್ಯ ನಿರ್ವಹಿಸಬೇಕೆಂದು ಪೌರಕಾರ್ಮಿಕರಿಗೆ ಹೇಳಿದರು.

ಹಾಗೂ ಚಿಂದಿ ಆಯುವವರಿಗೆ ಕಡ್ಡಾಯವಾಗಿ ನಮಸ್ತೆ ಸ್ಕೀಮ್‌ ಅಡಿಯಲ್ಲಿ ನೊಂದಾಯಿಸುವಂತೆ ಹಾಗೂ ಇದರಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರು ಅನುಷಾ, ಇಂಜಿನಿಯರ್ ಪ್ರಭು ಬಿರದಾರ್, ಸದಸ್ಯರುಗಳಾದ , ಟಿ ರಾಮಪ್ಪ, ಶಿವಣ್ಣ, ಕಾಸಲು ಪ್ರಕಾಶ, ಮೇಘರಾಜ, ವಿನಯ್ ಕುಮಾರ್, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಶಶಾಂಕ್.ಪಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!