ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ರೈತರಿಗೆ ಕೃಷಿ ಪಂಪ್‌ಸೆಟ್, ಜಲ ಸಂರಕ್ಷಣೆಕುರಿತು ಜಾಗೃತಿ ಕಾರ್ಯಕ್ರಮ- ರೈತರು ಪರ್ಯಾಯ ಶಕ್ತಿ ಬಳಕೆಗೆ ಮನವಿ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಬ್ಯುರೋ ಆಫ್ ಎನರ್ಜಿ ಎಫಿಸಿಎನ್ಸಿ (ಬಿ.ಇ.ಇ.) ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆ.ಆರ್.ಇ.ಡಿ.ಎಲ್.) ಸಹಯೋಗದಲ್ಲಿ ಕೃಷಿ ಪಂಪ್‌ಸೆಟ್, ಜಲ ಸಂರಕ್ಷಣೆ ಕುರಿತು ರೈತರಿಗೆ ಜಾಗೃತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಳ್ಳಾರಿಯ ಜಿಲ್ಲಾ ಉಪ ಕೃಷಿ ನಿರ್ದೇಶಕ ಎಸ್.ಎನ್. ಮಂಜುನಾಥ್ ರೈತರು ಭವಿಷ್ಯದ ದೃಷ್ಟಿಯಿಂದ ವಿದ್ಯುತ್‌ನ್ನು ಅವಲಂಭಿಸದೆ ಸೌರ, ಜೈವಿಕ ಸೇರಿದಂತೆ ಪರ್ಯಾಯ ಶಕ್ತಿಗಳ ಬಳಕೆಗೆ ಜಾಗ್ರತೆ ವಹಿಸಬೇಕಾಗಿದೆ ಎಂದರು. ಸರ್ಕಾರ ಸೂಚಿಸಿದ ಕಡಿಮೆ ವಿದ್ಯುತ್ ಬಳಕೆಯ ಮಾದರಿ ದಕ್ಷ ಯಂತ್ರಗಳನ್ನು ಬಳಸುವುದರಿಂದ ವಿದ್ಯುತ್ ಉಳಿತಾಯ ಸಾಧ್ಯವಾಗಲಿದೆ ಎಂದರು.
ಜೆಸ್ಕಾಂ ಎಇಇ ಮಲ್ಲಿಕಾರ್ಜುನಗೌಡ ಮಾತನಾಡಿ ಇಂಧನ ಸಂರಕ್ಷಣಾ ಕಾಯ್ದೆ, ಪಂಪ್‌ಸೆಟ್ ಗುಣಮಟ್ಟ ಕಾಯ್ದುಕೊಳ್ಳುವಿಕೆ, ಗಂಗಾವತಿಯ ಸಹಾಯಕ ಪ್ರಾಧ್ಯಾಪಕ ಆರ್. ಬದರಿ ಪ್ರಸಾದ್ ಜಲಸಂರಕ್ಷಣೆ, ಬಳ್ಳಾರಿಯ ಕೊರ್ಲಗುಂದಿ ಗುರುಪ್ರಸಾದ್ ಬಿಇಇ ಸ್ಟಾರ್ ಲೇಬಲ್ ಹೊಂದಿರುವ ಕೃಷಿ ಪಂಪ್‌ಸೆಟ್ ಬಳಕೆ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಡಾ. ಅಭಿಲಾಷ ಸಿ.ಆರ್. ರೈತರಿಗೆ ಉಪಯುಕ್ತವಾದ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ವಿದ್ಯಾವತಿ ಹೊಸಮನಿ,ಕೃಷಿ ಅಧಿಕಾರಿಗಳಾದ ನವ್ಯಾ ಪ್ರಶಾಂತ್, ಏಸುಬಾಬು, ಶಿವಪ್ಪ ಬಾರಿಗಿಡದ, ಈಶ್ವರ, ರೈತರಾದ ದೊಡ್ಡ ಬಸಪ್ಪ,ಜೆ.ರುದ್ರಪ್ಪ, ಸರಸ್ವತಿ, ಮಂಜುಗೌಡ, ಹಂದಿಹಾಳ್ ನಿಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!