ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಹೊಲಿಗೆ ತರಬೇತಿ ಉದ್ಘಾಟನಾ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಬೈಲಹೊಂಗಲ ಯೋಜನಾಕಚೇರಿಯ ವ್ಯಾಪ್ತಿಯ ದೊಡವಾಡ ವಲಯದ ಶಾಂತಿನಗರ ಕಾರ್ಯಕ್ಷೇತ್ರ ಶ್ರೀ ಗ್ರಾಮದೇವತೆ ಜ್ಞಾನವಿಕಾಸ ಕೇಂದ್ರದಲ್ಲಿ ಈ ದಿನ ಉಚಿತವಾಗಿ ಮೂರು ತಿಂಗಳ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಸಂಗೀತ ಮಡಿವಾಳಪ್ಪ ಚಂದರಗಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ವೀರೇಂದ್ರ ಸಂಗೋಳಿ, ತರಬೇತಿ ಟೀಚರ್ ಗೋರಿಮಾ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಶೈಲಾ J ಇವರ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ತರಬೇತಿ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದ ಕುರಿತು ತಾಲೂಕಿನ ಜ್ಞಾನವಿಕಾಸ ಸಮನ್ವಧಿಕಾರಿಗಳಾದ ಶ್ರೀಮತಿ ಶೈಲಾ ಇವರು ಉಚಿತ ಹೊಲಿಗೆ ತರಬೇತಿಯನ್ನು ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಮಟ್ಟದ ಮಹಿಳೆಯರು ಮೂರು ತಿಂಗಳು ಉಚಿತ ತರಬೇತಿ ಪಡೆದು, ಸದೃಢ ಜೀವನಕ್ಕೆ ಸ್ವ ಉದ್ಯೋಗ ಅವಶ್ಯಕತೆ ಇದೆ ಎಂದು ಮಾಹಿತಿ ನೀಡಿದರು. ಪ್ರತಿ ಹೆಣ್ಣು ಮಕ್ಕಳು ಸ್ವ ಉದ್ಯೋಗ ಮಾಡುವ ಮೂಲಕ ಕುಟುಂಬದ ಆಧಾರವಾಗಬೇಕು ಹಾಗೂ ಸ್ವತಂತ್ರವಾಗಿ ಜೀವನ ಕಟ್ಟಿಕೊಳ್ಳಬೇಕು ಎಂದು ಹೇಳಿದರು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ತ್ರೀ ಯಾರನ್ನು ಆರ್ಥಿಕ ಸದೃಢ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎಲ್ಲಾ ಸಂಸ್ಥೆಗಳಿಗೆ ಮಾದರಿಯಾಗಿದೆ ಇದರ ಉಪಯೋಗ ಪಡೆದುಕೊಳ್ಳಿರಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ರತ್ನ ಸೋಬಾನದ, ಸ್ವಾಗತವನ್ನು ಗಂಗಮ್ಮ ಉಜ್ಜಿನಿ ಮಠ ಧನ್ಯವಾದಗಳನ್ನು ಅನ್ನಪೂರ್ಣ ಧಾರವಾಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸವಿತಾ ಮೆನಸಿನಕಾಯಿ, ಸವಿತಾ ಇಂಚಲ್ ಸರ್ವ ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಿರ್ವಹಣೆ ಮಾಡಲಾಯಿತು.

ವರದಿ ಉಮೇಶ್ ಗೌಡರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!