ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಟ್ಟಣದ ವಾರ್ಡ್ ಗಳಲ್ಲಿ ತಲಾ 50 ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ : ಪಟ್ಟಣದ 3,5,9 ಮತ್ತು 12ನೇ ವಾರ್ಡಿನಲ್ಲಿ 2024-25ನೇ ಸಾಲಿನ ಕೆಕೆ ಆರ್ ಡಿಬಿ ಸಿಎಂಡಿಕ್ಯೂ 2515 ಯೋಜನೆಯಡಿ ತಲಾ 50 ಲಕ್ಷದಂತೆ ಸುಮಾರು 2ಕೋಟಿ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು.
ನಂತರ ಶಾಸಕ ಗಣೇಶ ಅವರು ಪತ್ರಕರ್ತರೊಂದಿಗೆ ಮಾತನಾಡಿ, 5ನೇ ವಾರ್ಡಿನಲ್ಲಿ ಸುಮಾರು 5 ಕೋಟಿ ಅಧಿಕ ವೆಚ್ಚದಲ್ಲಿ ಸಾಕಷ್ಟು ಅಭಿವೃದ್ದಿ ಕಾಮಗಾರಿಗಳಾಗಿವೆ. 7ನೇ ವಾರ್ಡಿನಲ್ಲಿಯೂ ಸಹ ಸುಮಾರು 1.50 ಕೋಟಿ ವೆಚ್ಚದಲ್ಲಿ ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಯಿತು. ಪಟ್ಟಣದ ಕೆಲವೊಂದು ವಾರ್ಡಿನಲ್ಲಿ ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳ ಅವಶ್ಯಕತೆ ಇದೆ. ಉಳಿದ ವಾರ್ಡ್ ಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಸುಮಾರು 7.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪುರಸಭೆ ಕಟ್ಟಡವಾಗಲಿದೆ. 2 ಕೋಟಿ ವೆಚ್ಚದಲ್ಲಿ ಹಳೆ ಬಸ್ ನಿಲ್ದಾಣ ಅಭಿವೃದ್ಧಿ ಪಡಿಸಲಾಗುವುದು. 3 ಕೋಟ ವೆಚ್ಚದಲ್ಲಿ ಅಗ್ನಿಶಾಮಕದಳ ಕಟ್ಟಡ ಕಾಮಗಾರಿಗೆ ಅತಿ ಶೀಘ್ರದಲ್ಲಿ ಭೂಮಿ ಪೂಜೆ ಸಲ್ಲಿಸಲಾಗುವುದು. ಸೋಮಪ್ಪ ಕೆರೆ ಅಭಿವೃದ್ಧಿ ಸುಮಾರು 5 ಕೋಟಿ ಅನುದಾನ ಬಂದಿದೆ. ಹೀಗೆ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ನಿವೇಶನ ನೀಡಬೇಕೆಂಬುದು ಬಹುಬೇಡಿಕೆಯಾಗಿದ್ದು, ಜಮೀನು ಹುಡುಕಾಟ ನಡೆದಿದ್ದು, ಯಾರಾದರೂ ರೈತರು 10 ಎಕರೆ ಜಮೀನು ನೀಡಿದರೆ, ಸರ್ಕಾರದಿಂದ ಅನುದಾನ ಕೊಡಿಸಿ, ಬಡ ಹಾಗೂ ಮಧ್ಯಮವರ್ಗದ ಜನತೆಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯರಾದ ಸಿ.ಆರ್.ಹನುಮಂತ, ಕೆ.ಎಸ್.ಚಾಂದ್ ಭಾಷಾ, ವಿ.ನಾಗಮ್ಮ ಸತ್ಯಪ್ಪ, ಗುಡುದಮ್ಮ ಶ್ರೀನಿವಾಸ, ಸುಮಾ ರಾಘು, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಜೆಇ ಆನಂದ, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪ್ರಧಾನ ಕಾರ್ಯದರ್ಶಿ ರಘುನಾಯಕ, ಮುಖಂಡರಾದ ಕೆ.ಷಣ್ಮುಖಪ್ಪ, ಬಿ.ಸಿದ್ದಪ್ಪ, ವಿ.ಸತ್ಯಪ್ಪ, ಹೋಟಲ್ ಶೇಕ್ಷಾವಲಿ, ಪೇಂಟರ್ ಮಸ್ತಾನ್, ಆಟೋ ರಘು, ಶ್ರೀನಿವಾಸ, ನಾಗರಾಜ, ಡಿಎಸ್ ಪ್ರಸಾದ್, ಅತ್ತಾವುಲ್ಲಾ ರೆಹಮಾನ್, ಕೊಟ್ಟಾಲ್ ವಿರೇಶ, ಶಶಿಕುಮಾರ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!