ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರ ಅಭಿವೃದ್ದಿಗೆ ಬದ್ಧ ರೈತರ ಜೊತೆ ಸಮಾಲೋಚನೆ ನಡೆಸಿದ ಶಾಸಕ ಎಂ.ಆರ್. ಮಂಜುನಾಥ್

ಚಾಮರಾಜನಗರ/ ಹನೂರು: ಶಾಸಕ ಎಂ.ಆರ್.ಮಂಜುನಾಥ್ ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಸಾಮೂಹಿಕ ನಾಯಕತ್ವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಂಘದ ಮುಖಂಡರುಗಳ ಜೊತೆ ಸಭೆ ನಡೆಸಿ ರೈತರ ಸಮಸ್ಯೆಯನ್ನು ಆಲಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ನೀರಿನ ಸಮಸ್ಯೆ ಬಗೆಹರಿಸಲು ಈಗಾಗಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಿನ ಸಮಸ್ಯೆ ಇರುವಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ.
ಮಲೈಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡುವ ಬಗ್ಗೆ  ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು ಅಲ್ಲಿನ ಮೂಲ ನಿವಾಸಿಗಳಿಗೆ ತೊಂದರೆಯಾಗದೇ ಇರುವ ಬಗ್ಗೆ ಕ್ರಮವಹಿಸಬೇಕು.
ಅರಣ್ಯ ಇಲಾಖೆಯ ಅಧಿಕಾರಿಗಳು  ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಲ್ಲಿ ವಿಫಲರಾಗಿರುವ ಬಗ್ಗೆ ಮಾತನಾಡಿದ ಶಾಸಕರು ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಬ್ಬಾಳಿಕೆ ನಡೆಸುವ ಅಧಿಕಾರಿಗಳಿಗೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಚಂಗಡಿ ಗ್ರಾಮ ಸ್ಥಳಾಂತರಕ್ಕೆ ಒತ್ತು:
ಕಾಡಂಚಿನ ಗ್ರಾಮವಾದ ಚಂಗಡಿ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರವಾಗದಿರುವುದರಿಂದ ಮಾನವ ಮತ್ತು ವನ್ಯಜೀವಿ ಸಂಘರ್ಷ ತಪ್ಪುತ್ತದೆ. ಈ ಸಂಬಂಧ ಚಂಗಡಿ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಿ ಜಾಗ ನಿಗದಿ ಮಾಡಲಾಗಿದ್ದು ಸರ್ಕಾರದ ಹಂತದಲ್ಲಿ ಇದೆ ಎಂದರು.

ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವನಿಟ್ಟಿನಲ್ಲಿ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಕಾಡಂಚಿನ ಗ್ರಾಮಗಳಲ್ಲಿ ರೈತರಿಗೆ ಮೂಲಭೂತ ಸೌಕರ್ಯಗಳ ಕಲ್ಪಿಸುವ ಕುರಿತು ಮಾತನಾಡಿದ ಶಾಸಕರು ರೈತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬದ್ದನಾಗಿದ್ದೇನೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರುಗಳಾದ ಹೊನ್ನೂರು ಪ್ರಕಾಶ್, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಷಣ್ಮುಖ ಸ್ವಾಮಿ, ಚಾಮರಾಜನಗರ ತಾಲ್ಲೂಕು ಅಧ್ಯಕ್ಷ ಬಸವಣ್ಣ,ಜಿಲ್ಲಾ ಉಪಾಧ್ಯಕ್ಷ ಮಹೇಶ್ (ಹಸುಗುಳಿ) ಹನೂರು ಮಾದಪ್ಪ, ಚಂಗಡಿ ಕರಿಯಪ್ಪ, ಶಾಂತ್ ಕುಮಾರ್, ವಿನಿಸ್, ಅಮೋಘ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!