ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪಘಾತ :ಹಳ್ಳಕ್ಕೆ ಉರುಳಿದ ಬಸ್

ಅಂಕೋಲಾ: ತಾಲ್ಲೂಕಿನ ಅಗಸೂರು ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಖಾಸಗಿ ಬಸ್ ಮಗುಚಿ ಬಿದ್ದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸೋಮವಾರ ನಸುಕಿನ ಜಾವ 2 ಗಂಟೆ ಗೆ ಈ ಅಪಘಾತ ಸಂಭವಿಸಿದ್ದು, ಘಟನೆ ತೀವ್ರತೆಯಿಂದ ಕೆಲ ಪ್ರಯಾಣಿಕರು ಬಸ್‌ನಲ್ಲಿ ಸಿಕ್ಕು ಹಾಕಿಕೊಂಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾ ಪೋಲಿಸರು ಸ್ಥಳಕ್ಕೆ ಬಂದಿದ್ದಾರೆ.

ಬೆಳಗಾವಿ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.
ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಪ್ರಯಾಣಿಕರಲ್ಲಿ ಕೆಲವರಿಗೆ ಗಂಭೀರವಾಗಿ ಗಾಯಗಳು ಆಗಿವೆ, ಉಳಿದವರಿಗೆ ಸಣ್ಣಪುಟ್ಟ ಪೆಟ್ಟು ಆಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿರುವ ಐದು ಮಂದಿ ಪ್ರಯಾಣಿಕರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಣ್ಣ ಪುಟ್ಟ ಗಾಯಗೊಂಡವರನ್ನು ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಪೋಲಿಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದು, ಬಸ್ ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ.

ವರದಿ ಸುಶಾಂತ್ ಭೋವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!