ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಗಣೇಶ

ಬಳ್ಳಾರಿ/ ಕಂಪ್ಲಿ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿಯ ಸಿ. ಎಂ. ಡಿ. ಕ್ಯೂ 2515 ಯೋಜನೆಯಡಿ ಸುಮಾರು ಕೋಟ್ಯಾಂತರ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಜೆ. ಎನ್. ಗಣೇಶ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
ಇಲ್ಲಿನ ನಂ.10 ಮುದ್ದಾಪುರ ಗ್ರಾಪಂಯ ಕಣವಿತಿಮ್ಮಲಾಪುರ ಗ್ರಾಮದಲ್ಲಿ ಸುಮಾರು 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಶಾಸಕ ಗಣೇಶ ಮಾತನಾಡಿ, ಕಣವಿ ತಿಮ್ಮಲಾಪುರ ಗ್ರಾಮದಲ್ಲಿರುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕ್ಷೇತ್ರದಲ್ಲಿ ಮೊದಲು ಕಣವಿತಿಮ್ಮಲಾಪುರ ಗ್ರಾಮವು ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ಗ್ರಾಮವಾಗಿದೆ. ಇಲ್ಲಿನ ಜನತೆಗೆ ರಸ್ತೆ ಸೇರಿದಂತೆ ನಾನಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಈಗ ಶಿಕ್ಷಕರು ಗ್ರಾಮದಲ್ಲಿ ಶಾಲೆಯ ಹೊಸ ಕೊಠಡಿಗಳ ಬೇಡಿಕೆ ಇಟ್ಟಿದ್ದು, ಅತಿ ಶೀಘ್ರದಲ್ಲೇ ಶಾಲಾ ಕೊಠಡಿಗೆ ಅನುದಾನ ಹಾಕಿ, ಚಾಲನೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಉಳ್ಳೂರು ಫಕ್ಕೀರಪ್ಪ, ಟಿ.ರಾಮಯ್ಯ, ಅಕ್ಕಿ ರೇಣುಕಪ್ಪ, ಜಿ.ಕೃಷ್ಣಪ್ಪ, ಟಿ.ರಾಮಲಿಸ್ವಾಮಿ, ಮಸೀದಿ ದೊಡ್ಡಬಸಪ್ಪ, ರಕ್ಕಪ್ಪ, ಯಂಕಣ್ಣ ಸೇರಿದಂತೆ ಶಿಕ್ಷಕರು ಹಾಗೂ ಕಾರ್ಯಕರ್ತರು ಇದ್ದರು.

ಮೆಟ್ರಿ : ಇಲ್ಲಿನ ಮೆಟ್ರಿ ಗ್ರಾಮದಲ್ಲಿ 40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಗಣೇಶ ಅಡಿಗಲ್ಲು ಪೂಜೆ ಸಲ್ಲಿಸಿದರು.
ಈ ವೇಳೆ ಗ್ರಾಪಂ ಅಧ್ಯಕ್ಷೆ ನಾಗಮ್ಮ, ಸದಸ್ಯರಾದ ಗಿರೀಶ, ಕುಮಾರ, ಸೊಸೈಟಿ ಅಧ್ಯಕ್ಷ ಹೊಸಕೋಟೆ ಜಗದೀಶ, ಮುಖಂಡರಾದ ಗಂಗಾಧರ, ಶಿವಪುತ್ರಪ್ಪ, ಕುಂಬಾರ ರಾಜ, ಜಗದೀಶ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ತದನಂತರ ಸುಗ್ಗೇನಹಳ್ಳಿ ಗ್ರಾಪಂಯ ಮಾನವಿಹಳ್ಳಿ ಗ್ರಾಮದಲ್ಲಿ ಸುಮಾರು 40 ಲಕ್ಷ ಹಾಗೂ ದೇವಸಮುದ್ರ ಗ್ರಾಪಂಯ ಹಿರೇಜಾಯಿಗನೂರು ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!