ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲರ್ನಿಂಗ್ ಲಿಂಕ್ ಫೌಂಡೇಶನ್ ವತಿಯಿಂದ ಅಪೌಷ್ಟಿಕತೆ ಮತ್ತು ರಕ್ತಹೀನತೆ ಕುರಿತು ಜಾಗೃತಿ ಕಾರ್ಯಕ್ರಮ

ಕಲಬುರಗಿ/ ನಾಲವಾರ : ಸಮೀಪದ ತರಕಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಲರ್ನಿಂಗ್ಸ್ ಫೌಂಡೇಶನ್ ಸಂಸ್ಥೆಯ ಸಹಯೋಗದೊಂದಿಗೆ ಅಪೌಷ್ಟಿಕತೆ ಮತ್ತು ರಕ್ತಹೀನತೆ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಯಿತು. ಕೊಲ್ಲೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ವರ್ಗದವರು ಕೂಡಾ ಆಗಮಿಸಿ ಈ ಒಂದು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಶಾಲೆಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದಂತಹ ಶ್ರೀ ಸೋಮಶೇಖರ್ ಅವರು ಸದೃಢ ದೇಹಕ್ಕೆ ಸದೃಢವಾದ ಆಹಾರ ಸೇವನೆ ಮಾಡಬೇಕು ಎಂದು ಮಕ್ಕಳಿಗೆ ತಿಳಿಸಿದರು. ಹೀಗೆ ರಕ್ತ ಹೀನತೆ ನಿರ್ಮೂಲನೆಗಾಗಿ ಸೇವಿಸಬೇಕಾದ ಆಹಾರಗಳ ಬಗ್ಗೆ ರಕ್ತ ಹೀನತೆ ಕಂಡು ಹಿಡಿಯುವ ವಿಧಾನವನ್ನು ತಿಳಿಸಿ ಮನುಷ್ಯನ ಆರೋಗ್ಯಕರ ಜೀವನ ಶೈಲಿಯ ಬಗ್ಗೆ ತಿಳಿಸಿ ದೇಹಕ್ಕೆ ಬೇಕಾಗಿರುವ ವಿಟಮಿನ್ ಗಳ ಸರ್ಕಾರದ ಯೋಜನೆ ಅಡಿಯಲ್ಲಿ ಈಗಾಗಲೇ ಶಾಲೆಯಲ್ಲಿ ನಡೆದಿರುವಂತಹ ಪೂರಕ ಪೌಷ್ಟಿಕ ಆಹಾರ ಮಾಹಿತಿ ಬಗ್ಗೆ ತಿಳಿಸಲಾಯಿತು. ಹಿರಿಯ ಸಂಪನ್ಮೂಲ ಶಿಕ್ಷಕರು ಆದಂತಹ ಶ್ರೀ ಚಂದ್ರು ಮುಂದಿನಮನಿ ಅವರು ಜಂಕ್ ಫುಡ್ ಸೇವನೆ ಮಾಡುವುದರಿಂದ ಮಕ್ಕಳಲ್ಲಿ ಆಗುವ ತೊಂದರೆಗಳ ಬಗ್ಗೆ ತಿಳಿಸಿದರು. ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ರಾಜ್ ಕುಮಾರ್ ಅವರು ದವಸ ಧಾನ್ಯಗಳು ಕಾಳುಗಳ ಆಹಾರ ಸೇವನೆ ಮಾಡುವುದರಿಂದ ದೇಹಕ್ಕೆ ಯಾವುದೇ ವಿಟಮಿನ್ ಗಳ ಕೊರತೆ ಉಂಟಾಗುವುದಿಲ್ಲ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ sdmc ಅಧ್ಯಕ್ಷರು ರಶೀದ್ ಪಟೇಲ್, ಶಾಲೆಯ ಸಹ ಶಿಕ್ಷಕರು ಮಂಜುನಾಥ್ ಪಾಟೀಲ್, ಸಯ್ಯದ್ ಹುಸೇನ್ ಹಾಗೂ ಅತಿಥಿ ಶಿಕ್ಷಕರು ಮಲ್ಲನಗೌಡ ಪೊಲೀಸ್ ಪಾಟೀಲ್, ರಾಜೇಂದ್ರ ಗುತ್ತೇದಾರ್, ರಮೇಶ್ ಜೋಶಿ, ಸುನಿತಾ ರಾಂಪೂರಹಳ್ಳಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮಂಜುಳಾ, ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಸಾಬಣ್ಣ ಗುಂಟುನೂರ ಹಾಗೂ ಆಶಾಲತಾ ಮೇಡಂ ಊರಿನ ಶಿಕ್ಷಣ ಪ್ರೇಮಿಗಳು ಶಾಂತಯ್ಯ ಗುತ್ತೇದಾರ್, ಮಲ್ಲಿಕಾರ್ಜುನ್ ಶಳ್ಳಗಿ. ಈ ಒಂದು ಕಾರ್ಯಕ್ರಮವನ್ನು ಸಮುದಾಯದ ಶಿಕ್ಷಕರಾದಂತಹ PASD ಶ್ರೀ ಶಿವಾನಂದ ರವರು ನೆರೆವೇರಿಸಿ ಕೊಟ್ಟರು. ಸಂಪನ್ಮೂಲ ಶಿಕ್ಷಕ ಶಶಿಕುಮಾರ್ ಅವರು ನೆರವೇರಿಸಿ ಕೊಟ್ಟರು ಮತ್ತು ಗ್ರಾಮದ ಹಿರಿಯರು, ಯುವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!