ಬಳ್ಳಾರಿ/ ಕಂಪ್ಲಿ : ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅಕಸ್ಮಿಕ ನಡೆದು ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಆಹಾರ ಸಾಮಗ್ರಿ ನಾಶವಾದ ಘಟನೆ ಕೋಟೆಯಲ್ಲಿ ನಡೆದಿದೆ.
ಸಂಡೂರ್ ರಿಯಾಜ್ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ.
ಜುಲೈ 22 ಮಂಗಳವಾರ ಸಾಯಂಕಾಲ ಘಟನೆ ನಡೆದಿದ್ದು ಮನೆಯಲ್ಲಿದ್ದ ಫ್ರಿಡ್ಜ್, ಟಿವಿ, ಆಹಾರ ಸಾಮಾಗ್ರಿ, ಬಟ್ಟೆ ಸೇರಿದಂತೆ ಲಕ್ಷಾಂತರ ಮೌಲ್ಯದ ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಕಿ ಬಿದ್ದ ಸಂದರ್ಭದಲ್ಲಿ ಮನೆಯವರು ಯಾರು ಇರಲಿಲ್ಲ ಎಂದು ತಿಳಿದುಬಂದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಯಪಾಯ ಸಂಭವಿಸಿಲ್ಲ.
ಪ್ರತ್ಯಕ್ಷದರ್ಶಿಗಳು ಸಮಯ ಪ್ರಜ್ಞೆಯನ್ನು ಮೆರೆದು ಬೆಂಕಿಯನ್ನು ನಂದಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ನೆರೆಹೊರೆಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪರಿಹಾರದ ಭರವಸೆಯನ್ನ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ



















