ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ ತುಳಿತಕ್ಕೆ ಅನಿತಾ ಎಂಬ ಮಹಿಳೆ ಮರಣ ಹೊಂದಿದ್ದು ಪದೇ ಪದೇ ಮಲೆನಾಡು ಭಾಗದಲ್ಲಿ ಆನೆ ತುಳಿತಕ್ಕೆ ಬಲಿಯಾಗುತ್ತಿರುವುದನ್ನು ಖಂಡಿಸಿ ನಿಖಿಲ್ ಕುಮಾರಸ್ವಾಮಿ ಇಂದು ಬಾಳೆಹೊನ್ನೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಗೂ ಅರಣ್ಯ ಸಚಿವರಾದ ಈಶ್ವರ್ ಕಂಡ್ರೆ ವಿರುದ್ಧ ವಾಗ್ದಾಳಿ ನಡೆಸಿ ಅವರು ಬಯಲುಸೀಮೆ ಮತ್ತು ಮಲೆನಾಡನ್ನು ಒಂದೇ ತರ ಎಂದು ಬಾಲಿಷ ಹೇಳಿಕೆ ನೀಡುತ್ತಿದ್ದಾರೆಂದು ಕಿಡಿಕಾರಿದರು ಸರ್ಕಾರ ನೀಡಿರುವ ಮೂರು ಕಾಸು ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ ಎಂದರು ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಸರ್ಕಾರವನ್ನು ಒತ್ತಾಯಿಸಿದರು.
ವರದಿ. ಪ್ರಸಾದ್ ಹೆಚ್. ಬಿ. ತೀರ್ಥಹಳ್ಳಿ



















