ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಉಪವಾಸ ಸತ್ಯಾಗ್ರಹ

ಬೆಳಗಾವಿ ಜಿಲ್ಲೆ, ರಾಮದುರ್ಗ ತಾಲೂಕಿನ ಸಾಮಾಜಿಕ ಹಾಗೂ ರೈಲು ಹೋರಾಟಗಾರರೂ ಮತ್ತು ನ್ಯಾಷನಲ್ ಹ್ಯೂಮನ್ ರೈಟ್ಸ್ ನ ರಾಜ್ಯಾಧ್ಯಕ್ಷರಾದ ಶ್ರೀ ಬಿ ಯು ಬೈರಕದಾರ ಅವರು ರಾಮದುರ್ಗ ಪಟ್ಟಣಕ್ಕೆ ನೂತನ ರೈಲು ಮಾರ್ಗ ನಿರ್ಮಿಸುವಂತೆ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿಯನ್ನ ಸಲ್ಲಿಸಿ ಪ್ರತಿಭಟನೆ ಮಾಡುತ್ತಾ ಬಂದಿದ್ದಾರೆ.

ಆದರೆ ಇಲ್ಲಿಯವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದ ಕಾರಣ ಮುಂಬರುವ ತಿಂಗಳು ಅಂದರೆ ಆಗಸ್ಟ್ 11 ನೇ ತಾರೀಖಿನಿಂದ ರಾಮದುರ್ಗ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ತಹಸೀಲ್ದಾರ ಕಛೇರಿ ಮುಂದೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ರಾಮದುರ್ಗ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈಲು ಹೋರಾಟ ಸಮಿತಿಯ ಮುಖಂಡರುಗಳಾದ ಸಿ,ಎಸ್ ಹಿರೇಮಠ್ , ಶಶಿಕಾಂತ ನೆಲ್ಲೂರು , ಡಿ. ಎಫ್ ಹಾಜಿ, ದಾದಾಪೀರ್ ಕೆರೂರ, ನಿವೃತ್ತ ಶಿಕ್ಷಕರಾದ ಸುರೇಶ್ ಕಲ್ಲೂರ, ನ್ಯಾಯವಾದಿಗಳಾದ ರಾಜೇಶ ಹರ್ಲಾಪುರ, ಪತ್ರಕರ್ತರಾದ ವಿರೇಶ್ ಬಳಿಗೇರ, ರಂಗನಾಥ ಮೂಲಿಮನಿ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!